ಒರ್ವ ಜೀವಮಾನ ಸಾಧಕ ಸೇರಿ ಐವರಿಗೆ ಸಮುದಾಯೋತ್ಸವ-2020 ಪ್ರಶಸ್ತಿಗೆ ಆಯ್ಕೆ
ಉಡುಪಿ: ಕೆಥೊಲಿಕ್ ಉಡುಪಿ ಪ್ರದೇಶ್ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ 2020 ಜನವರಿ 19ರಂದು ಕಲ್ಯಾಣಪುರದ ಮೌಂಟ್ ರೋಜರಿ ಚರ್ಚಿನ ಮೈದಾನದಲ್ಲಿ ಆಯೋಜಿಸಿರುವ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಚಾರಿತ್ರಿಕ ಸಮ್ಮೇಳನ ಸಮುದಾಯೋತ್ಸವ-2020 ಇದರಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ನಾಲ್ವರು ಸಾಧಕರು ಮತ್ತು ಓರ್ವರಿಗೆ ಜೀವಮಾನ ಸಾಧನೆ ಪ್ರಶಸ್ತಿಗಳಿಗಾಗಿ ಆಯ್ಕೆ ಮಾಡಲಾಗಿದೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಪತ್ರಕರ್ತ ಜಾನ್ ಡಿಸೋಜಾ, ಕುಂದಾಪುರ (ಸಮೂಹ ಮಾಧ್ಯಮ), ಪ್ರಗತಿಪರ ಕೃಷಿಕ ಜೂಲಿಯನ್ ದಾಂತಿ (ಭತ್ತದ ಕೃಷಿ), ಸಮಾಜ ಸೇವಕ ರೋಶನ್ ಡಿಸೋಜಾ ಬೆಳ್ಮಣ್ (ಸಮಾಜಸೇವೆ), ನಾಟಿ ವೈದ್ಯ ಜೆರೋಮ್ ಫ್ರಾನ್ಸಿಸ್ ಅಂದ್ರಾದೆ ಕಲ್ಮಾಡಿ (ಮನೆ ಮದ್ದು) ವಿಭಾಗಗಳಲ್ಲಿ ಆಯ್ಕೆ ಮಾಡಲಾಗಿದೆ. ಸಹಕಾರಿ ಧುರೀಣ ಜಾನ್ ಡಿಸಿಲ್ವಾ ಇವರಿಗೆ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದ್ದು ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ನಿಕಟಪೂರ್ವ ಅಧ್ಯಕ್ಷ ವಲೇರಿಯನ್ ಫೆರ್ನಾಂಡಿಸ್ ಇವರ ಸಂಚಾಲಕತ್ವದಲ್ಲಿ 6 ಮಂದಿ ಸದಸ್ಯರ ಆಯ್ಕೆ ಸಮಿತಿಯ ಮೂಲಕ ಆಯ್ಕೆ ನಡೆದಿದ್ದು ಧರ್ಮಪ್ರಾಂತ್ಯದ ಎಲ್ಲಾ 52 ಚರ್ಚುಗಳಿಂದ ಬಂದ ಅರ್ಜಿಗಳನ್ನು ಪರಿಶೀಲಿಸಿ ಪ್ರಶಸ್ತಿಗಳ ಆಯ್ಕೆ ಪ್ರಕ್ರಿಯೆ ನಡೆದಿರುತ್ತದೆ. ಪ್ರಶಸ್ತಿ ವಿಜೇತರಿಗೆ ಜನವರಿ 19ರಂದು ಮಧ್ಯಾಹ್ನ 2.30 ಗಂಟೆಗೆ ನಡೆಯುವ ಸಮುದಾಯೋತ್ಸವ-2020 ಇದರ ಸಮಾರೋಪ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.
ಇದೇ ಸಂದರ್ಭದಲ್ಲಿ ಉಡುಪಿ ಮೂಲದವರಾಗಿದ್ದು, ಕಳೆದ 2 ವರ್ಷಗಳಿಂದ ಹೊರ ದೇಶ, ರಾಜ್ಯಗಳಲ್ಲಿ ಸಾಧನೆ ಮಾಡಿದವರಿಗೆ, ಸಹಕಾರಿ ಸಂಘ ಹಾಗೂ ಎ.ಪಿ.ಎಮ್.ಸಿ ಗಳಲ್ಲಿ ನಿರ್ದೇಶಕರಾಗಿದ್ದವರಿಗೆ, ಗಜೆಟೆಡ್ ಮತ್ತು ಅದಕ್ಕಿಂತ ಉನ್ನತ ಹಂತದ ಅಧಿಕಾರಿಗಳಿಗೆ ಹಾಗೂ ವಿವಿಧ ಸಂಘಟನೆಗಳಲ್ಲಿ ಸೇವೆ ಸಲ್ಲಿಸುವ ಕ್ರೈಸ್ತ ನಾಯಕರಿಗೆ ಸನ್ಮಾನಿಸಲಾಗುವುದು.
ಸಮಾವೇಶದ ಉದ್ಘಾಟನೆ ಬೆಳಿಗ್ಗೆ 9.30 ಕ್ಕೆ ಜರುಗಲಿದ್ದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಉತ್ತರಾಖಂಡ್ ಮಾಜಿ ರಾಜ್ಯಪಾಲೆ ಮಾರ್ಗರೆಟ್ ಆಳ್ವಾ ಭಾಗವಹಿಸಲಿದ್ದು, ಕ್ರೈಸ್ತ ಸಮುದಾಯದ ಪ್ರಸ್ತುತ ಪರಿಸ್ಥಿತಿ ಮತ್ತು ಭವಿಷ್ಯದ ದೃಷ್ಟಿಕೋನ ವಿಚಾರದಲ್ಲಿ ಮಾಜಿ ಶಾಸಕ ಹಾಗೂ ನಿವೃತ್ತ ಕೆ ಎಸ್ ಅಧಿಕಾರಿ ಜೆ ಆರ್ ಲೋಬೊ ಪ್ರಧಾನ ಭಾಷಣ ಮಾಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಉತ್ತರಾಖಂಡದ ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ, ಉಡುಪಿ ಧರ್ಮಾಧ್ಯಕ್ಷ ರೆ|ಡಾ|ಜೆರಾಲ್ಡ್ ಐಸಾಕ್ ಲೋಬೊ, ಬೆಂಗಳೂರು ಮಹಾ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಅ|ವಂ|ಡಾ|ಪೀಟರ್ ಮಚಾದೊ, ಮಂಗಳೂರಿನ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಪೀಟರ್ ಪಾವ್ಲ್ ಸಲ್ಡಾನಾ, ನಿವೃತ ಕೆ ಎ ಎಸ್ ಅಧಿಕಾರಿ ಅ್ಯಂಟನಿ ಮೆಂಡೊನ್ಸಾ, ಹಿರಿಯ ಪತ್ರಕರ್ತ ಗೇಬ್ರಿಯಲ್ ವಾಜ್, ಮಹಾರಾಷ್ಟ್ರದ ಹಿರಿಯ ರಾಜಕೀಯ ನಾಯಕಿ ಜಾನೆಟ್ ಡಿಸೋಜ, ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ, ಕ್ರೈಸ್ತ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಜೊಯ್ಲಸ್ ಡಿಸೋಜಾ, ಮುಂಬೈ ಮಾಡೆಲ್ ಕೋ-ಅಪರೇಟಿವ್ ಅಧ್ಯಕ್ಷ ಅಲ್ಬರ್ಟ್ ಡಿಸೋಜಾ, ಎಮ್ ಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಸೇರಿದಂತೆ ಹಲವಾರು ಧಾರ್ಮಿಕ, ಸಾಮಾಜಿಕ, ರಾಜಕೀಯ ನಾಯಕರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ .
ಪ್ರಶಸ್ತಿ ಪುರಸ್ಕೃತರ ಪರಿಚಯ