ಕಂಕನಾಡಿ ಮನೆ ಕಳವು ಪ್ರಕರಣದ ಆರೋಪಿಯ ಬಂಧನ
ಮಂಗಳೂರು: ನಗರದ ಯೆಯ್ಯಾಡಿಯ ದಂಡಕೇರಿ ಮನೆಯೊಂದರಲ್ಲಿ ರೂ.1,40,000/- ಬೆಲೆ ಬಾಳುವ ಚಿನ್ನಾಭರಣಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತನನ್ನು 3 ದಿನದಲ್ಲಿ ಬಂಧಿಸಿ ಆರೋಪಿತನಿಂದ ಕಳವು ಮಾಡಿದ ರೂ. 1,70,000/- ಬೆಲೆ ಬಾಳುವ ಚಿನ್ನಾಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟರ್ ನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಕೊಂಚಾಡಿ ಯೆಯ್ಯಾಡಿ ನಿವಾಸಿ ಸಾಗರ್ (33) ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ಐ.ಪಿ.ಎಸ್ ರವರ ಮಾರ್ಗದರ್ಶನದಂತೆ ಸಿದ್ದಾರ್ಥ್ ಗೋಯಲ್ (ಕಾ&ಸು) ಐ.ಪಿ.ಎಸ್ ಮತ್ತು ದಿನೇಶ್ ಕುಮಾರ್ ಕೆ.ಎಸ್.ಪಿ.ಎಸ್ ಉಪ-ಪೊಲೀಸ್ ಆಯುಕ್ತರು ಅಪರಾಧ ಹಾಗೂ ಸಂಚಾರ ರವರ ನಿರ್ದೇಶನದಂತೆ ಹಾಗೂ ಧನ್ಯಾ ನಾಯಕ್ ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ದಕ್ಷಿಣ ವಿಭಾಗರವರ ನೇತೃತ್ವದಲ್ಲಿ ಕಂಕನಾಡಿ ನಗರ ಠಾಣೆಯ ನಿರೀಕ್ಷಕರಾದ ಟಿ.ಡಿ ನಾಗರಾಜ್ ರವರ ಸಾರಥ್ಯದಲ್ಲಿ ಪಿ.ಎಸ್.ಐ ವಿನಾಯಕ ಭಾವಿಕಟ್ಟಿ ಸಿಬ್ಬಂದಿಗಳಾದ ಹೆಚ್ ಸಿ ಜಯಾನಂದ. ರಾಘವೇಂದ್ರ, ಗಂಗಾಧರ್, ರಾಜಿಸಾಬ ಮುಲ್ಲಾ, ಮತ್ತು ಚೇತನ್ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಬಾಗವಹಿಸಿದ್ದರು.