ಕಂಪೌಂಡ್ ಕುಸಿದು, ಮಣ್ಣಿನಡಿ ಸಿಲುಕಿ ಇಬ್ಬರು ಕಾರ್ಮಿಕರು ಮೃತ್ಯು
ಮಂಗಳೂರು: ಕಾಂಪೌಂಡ್ ಆವರಣ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ನಗರದ ಬಂಟ್ಸ್ ಹಾಸ್ಟೆಲ್ನ ಕರಂಗಲ್ಪಾಡಿ ಜಂಕ್ಷನ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಬಾಗಲಕೋಟೆ ನಿವಾಸಿ ಭೀಮಪ್ಪ(25) ಮತ್ತು ಪಶ್ಚಿಮ ಬಂಗಾಳದ ಮಸೂದ್ (20) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಕಾರ್ಮಿಕರು ಖಾಸಗಿ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರೆ, ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದ ಪಕ್ಕದ ಗೋಡೆ ಕಾರ್ಮಿಕರ ಮೇಲೆ ಕುಸಿದಿದೆ.ಎಲ್ಲಾ ಐದು ಕಾರ್ಮಿಕರು ಅವಶೇಷಗಳ ಅಡಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಮಣ್ಣಿನಡಿ ಇನ್ನೂ ಮೂವರು ಸಿಲುಕಿದ್ದರೆನ್ನಲಾಗಿದೆ. ಘಟನಾ ಸ್ಥಳಕ್ಕೆ ಪಾಂಡೇಶ್ವರ ಹಾಗೂ ಕದ್ರಿಯ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.