Home Mangalorean News Kannada News ಕಟ್ಟಡ ನಿರ್ಮಾಣಕ್ಕೆ ಭೂಮಿ ಅಗೆತ: ಕೇಸು ದಾಖಲಿಸಲು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಕಟ್ಟಡ ನಿರ್ಮಾಣಕ್ಕೆ ಭೂಮಿ ಅಗೆತ: ಕೇಸು ದಾಖಲಿಸಲು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

Spread the love

ಕಟ್ಟಡ ನಿರ್ಮಾಣಕ್ಕೆ ಭೂಮಿ ಅಗೆತ: ಕೇಸು ದಾಖಲಿಸಲು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಮಂಗಳೂರು: ಮಳೆಗಾಲದಲ್ಲಿ ನಿರ್ಮಾಣ ಚಟುವಟಿಕೆಗಳಿಗೆ ಭೂಮಿ ಅಗೆಯುವುದರಿಂದ ಭೂಕುಸಿತ ಸಾಧ್ಯತೆಗಳಿರುವುದರಿಂದ ತಾತ್ಕಾಲಿಕವಾಗಿ ನಿಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಅವರು ಶುಕ್ರವಾರ ನಗರದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಈ ರೀತಿಯ ಕಾಮಗಾರಿಯಿಂದ ಸಾರ್ವಜನಿಕ ಸಮಸ್ಯೆ ಯಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಕಾರ್ಮಿಕರು ಪ್ರಾಣ ಕಳೆದುಕೊಂಡಿರುವ ಘಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಮಳೆಗಾಲದಲ್ಲಿ ನಿರ್ಮಾಣ ಕಾರ್ಯಗಳಿಗೆ ಭೂಮಿ ಅಗೆತಕ್ಕೆ ಅವಕಾಶ ನೀಡಬಾರದು. ಇದನ್ನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್ ಮಾತನಾಡಿ, ಈಗಾಗಲೇ ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಅಗತೆವನ್ನು ನಿಲ್ಲಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ಜಿ.ಪಂ. ಸಿಇಓ ಡಾ. ಆನಂದ್ ಮತ್ತಿತರರು ಇದ್ದರು.


Spread the love

Exit mobile version