ಕಡಬ ರಸ್ತೆ ಅಫಘಾತಕ್ಕೆ ಒರ್ವ ಸಾವು ನಾಲ್ಕು ಮಂದಿಗೆ ಗಾಯ
ಕಡಬ: ಖಾಸಗಿ ಬಸ್ ಹಾಗೂ ಓಮ್ನಿ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ದಾರುಣ ಘಟನೆ ಇಲ್ಲಿನ ಇಚಿಲಂಪಾಡಿಯಲ್ಲಿ ವರದಿಯಾಗಿದೆ.
ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದ್ದು, ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಓಮ್ನಿ ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಅಪಘಾದಲ್ಲಿ ಓಮ್ನಿಯಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತದ ತೀವ್ರತೆಗೆ ಬಸ್ ಹಾಗೂ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದ್ದು ಬಸ್ ಕಂದಕಕ್ಕೆ ಉರುಳಿದೆ.