ಕನ್ನಡ ಶಾಲೆಗಳನ್ನು ಉಳಿಸುವತ್ತ ಕ್ರಮ ಕೈಗೊಳ್ಳಿ : ವಿನಯ್ ಕುಮಾರ್ ಸೊರಕೆ
ಉಡುಪಿ: ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುತ್ತಿರುವ ಸರಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಪೋಷಕರು ಹಾಗೂ ಮಕ್ಕಳ ನಿರೀಕ್ಷೆಗೆ ತಕ್ಕಂತೆ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ತರಬೇಕು ಎಂದು ಕಾಪು ಶಾಸಕ ವಿನಯ ಕುಮಾರ್ ಸೊರಕೆ ಸೂಚಿಸಿದ್ದಾರೆ.
ಅವರು ಬುಧವಾರ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಉಡುಪಿ ತಾಲೂಕು ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಇಲಾಖೆ ಕೈಗೊಂಡ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದ ಶಿಕ್ಷಣಾಧಿಕಾರಿ ರವಿಶಂಕರ್, ಸರಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಆಂಗ್ಲ ಭಾಷೆಯನ್ನು ಕಲಿಸಲಾಗುತ್ತಿದ್ದು, ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲದ ರೀತಿಯಲ್ಲಿ ಶಿಕ್ಷಣ ವ್ಯವಸ್ಥೆ ಇದ್ದು, ಇದಕ್ಕಾಗಿ ಸರಕಾರದಿಂದ ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತಿದೆ, ಪರೀಕ್ಷೆ ಬಳಿಕ ಶಿಕ್ಷಕರು ಮನೆಮನೆಗಳಿಗೆ ತೆರಳಿ ಪೋಷಕರ ಮನವೊಲಿಸಿ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸುವಂತೆ ಮಾಡಲಿದ್ದಾರೆ ಎಂದರು.
ನಿವೇಶನ ಅರ್ಜಿ ಕುರಿತಂತೆ ಗ್ರಾಮ ಪಂಚಾಯತಿಗಳಲ್ಲಿ ಸಾಕಷ್ಟು ಅರ್ಜಿಗಳು ಬಾಕಿ ಉಳಿದಿದ್ದೂ, ಈ ಸಮಸ್ಯೆ ಬಗೆ ಹರಿಯುವಾಗೆ ಕಾಣುತ್ತಿಲ್ಲ ಎಂದು ಶಾಸಕರು ಹೇಳಿದರು. ಇದಕ್ಕೆ ಪ್ರತಿಕ್ರಿಸಿದ ಅಧಿಕಾರಿಗಳು ನಿವೇಶನದಾರರಿಗೆ ಮೀಸಲಿಟ್ಟ ಜಾಗ ಸಮಾಜಿಕ ಅರಣ್ಯ, ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಲ್ಲಿ ಆಕ್ಷೇಪಕ್ಕೆ ಒಳಪಡುತ್ತಿರುವುದರಿಂದ ಸಮಸ್ಯೆಯಾಗಿದೆ ಎಂದರು.
ಇಂಥ ಸಮಸ್ಯೆಗಳನ್ನು ಇಲಾಖೆಯಿಂದ ಇಲಾಖೆಗಳಿಗೆ ಪತ್ರ ಬರೆಯುತ್ತ ಕೂತಾಗ ಪರಿಹಾರವಾಗುವುದಿಲ್ಲ, ಮೂರ್ನಾಲ್ಕು ತಿಂಗಳು ಪತ್ರ ವ್ಯವಹಾರದ¯ಅವಧಿ ಮುಗಿದು ಹೋಗುತ್ತದೆ, ಕಂದಾಯ, ಅರಣ್ಯ ಇಲಾಖೆ ಅಧಿಕಾರಿಗಳು, ಪಿ.ಡಿ.ಒ, ಗ್ರಾ.ಪಂ ಅಧ್ಯಕ್ಷರು, ತಾಲೂಕು ಮಟ್ಟದ ಅಧಿಕಾರಿಗಳು ಒಂದೆಡೆ ಸಭೆ ಸೇರಿ ಈ ಬಗ್ಗೆ ನಿರ್ಣಯ ಕೈಗೊಳ್ಳಬೇಕು. ಈ ಪಕ್ರಿಯೆ ಮುಂದಿನ ವಾರದಿಂದಲೇ ಆರಂಭವಾಗಬೇಕು ಎಂದು ಶಾಸಕರು ಸೂಚಿಸಿದರು.
ತಾಲೂಕು ಪಂಚಾಯತಿ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಕಾರ್ಯನಿರ್ವಹಕ ಅಧಿಕಾರಿ ಶೇಷಪ್ಪ, ತಹಸೀಲ್ದಾರóï ಮಹೇಶ್ಚಂದ್ರ, ಜಿ.ಪಂ ಸದಸ್ಯರಾದ ವಿಲ್ಸನ್ ರೋಡ್ರಿಗ್ರಸ್, ಸುಧಾಕರ ಶೆಟ್ಟಿ ಮೈರ್ಮಾಡಿ, ಶಿಲ್ಪ.ಜಿ ಸುವರ್ಣ ಉಪಸ್ಥಿತರಿದ್ದರು.
ಸಣ್ಣ ನೀರಾವರಿ ಇಲಾಖೆ ಕಾಮಗಾರಿಗಳು ಸಾಕಷ್ಟು ವಿಳಂಬವಾಗುತ್ತಿದೆ, ಈ ಹಿಂದೆ ನಿರ್ಮಿಸಿದ ಕಿಂಡಿ ಅಣೆಕಟ್ಟುಗಳು ಸೋರುತ್ತಿವೆ ನೀರು ನಿಲ್ಲುತ್ತಿಲ್ಲ ಎಂದು ರೈತರು ದೂರುತ್ತಿದ್ದಾರೆ. ವೈಜ್ಞಾನಿಕ ಪರಿಶೀಲನೆ ನಡೆಸಿ ಕಾಮಗಾರಿ ಕಳಪೆಯಾಗದಂತೆ ನೋಡಿಕೊಳ್ಳಬೇಕು, ನೀರು ಕಡಿಮೆ ಬೇಸಿಗೆಯಲ್ಲಿ ಕಾಮಗಾರಿ ಪೂರ್ತಿ ಮುಗಿಸಬೇಕು ಎಂದು ಶಾಸಕರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದೆ ಇಲಾಖೆಯ ಅಧಿಕಾರಿ ತಾಲೂಕಿನ 11 ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿ ನಡೆಯುತಿದ್ದೂ 7 ಕಾಮಗಾರಿ ಮುಕ್ತಾಯಗೊಂಡಿದೆ, 4 ಪ್ರಗತಿಯಲ್ಲಿದೆ, 4 ಕೆರೆ ಅಭಿವೃದ್ದಿ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದರು. ಕಿಂಡಿ ಅಣೆಕಟ್ಟು ಸೋರಿಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿ, ಕ್ರಮಕೂಗೊಳ್ಳುವುದಾಗಿ ಉತ್ತರಿಸಿದರು.
ನಂದಿಕೂರು ಅಗ್ನಿ ಅವಘಡ ಸಂಬಂಧಿಸಿ ವಿಚಾರ ಪ್ರಸ್ತಾಪಿಸಿದ ಶಾಸಕರು ಅಗ್ನಿ ಅವಘಡದಿಂದ ಆ ಭಾಗಗಳಲ್ಲಿ ಗೇರು, ತೆಂಗು ವಿವಿಧ ತೋಟಗಾರಿಕೆ ಬೆಳೆಗಳು ಎಷ್ಟು ಪ್ರಮಾಣದಲ್ಲಿ ಹಾನಿಯಾಗಿವೆ ಎಂಬುದನ್ನು ತೋಟಗಾರಿಕೆ ಇಲಾಖೆ ವರದಿ ನೀಡಬೇಕು, ಪರಿಹಾರ ನೀಡುವ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಎಂದು ಶಾಸಕರು ತಿಳಿಸಿದರು.