Spread the love
ಕರಾವಳಿ ಜಿಲ್ಲೆಯ ಪಾಲಿಗೆ ಮಲತಾಯಿ ಬಜೆಟ್ : ಯಶ್ಪಾಲ್ ಸುವರ್ಣ
ಉಡುಪಿ: ಕರಾವಳಿ ಜಿಲ್ಲೆಯನ್ನು ಸದಾ ನಿರ್ಲಕ್ಷಿಸುವ ರಾಜ್ಯ ಸರ್ಕಾರದ ನಿಲುವು ಈ ಬಾರಿಯ ಬಜೆಟ್ ನಲ್ಲೂ ಮುಂದುವರೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಜನತೆಯ ಅಭಿವದ್ಧಿ ಬೇಡಿಕೆಗೆ ಯಾವುದೇ ಯೋಜನೆ ಘೋಷಿಸದೆ ಮಲತಾಯಿ ಧೋರಣೆಯ ಬಜೆಟ್ ಮಂಡಿಸಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಕರಾವಳಿ ಜಿಲ್ಲೆಯ ಮೀನುಗಾರಿಕೆ ಹಾಗೂ ಬಂದರು ಅಭಿವೃದ್ಧಿಗೆ ಯಾವುದೇ ಅನುದಾನ ಒದಗಿಸಿಲ್ಲ, ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು, ಬ್ರಹ್ಮಾವರ ಕೃಷಿ ಕಾಲೇಜು ಘೋಷಣೆಯ ಭರವಸೆ ಈಡೇರಿಲ್ಲ.
ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿಗೆ ಅಗತ್ಯ ಅನುದಾನ, ಪ್ರಾಕೃತಿಕ ವಿಕೋಪ ಪರಿಹಾರ ಮೊತ್ತ ಏರಿಕೆ, ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ, ನಾರಾಯಣ ಗುರು ಅಭಿವೃಧ್ದಿ ನಿಗಮಕ್ಕೆ ಅನುದಾನದ ಬಗ್ಗೆ ಯಾವುದೇ ಘೋಷಣೆ ಮಾಡದೇ ಸಿದ್ದರಾಮಯ್ಯ ತಮ್ಮ ದಾಖಲೆಯ 16 ನೇ ಬಜೆಟ್ ಬಗ್ಗೆ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ.
Spread the love