ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸಾಹಿತ್ಯ್ ಸಂಭ್ರಮ್ ಕಾರ್ಯಕ್ರಮ

Spread the love

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸಾಹಿತ್ಯ್ ಸಂಭ್ರಮ್ ಕಾರ್ಯಕ್ರಮ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡ ಸಾಹಿತ್ಯ್ ಸಂಭ್ರಮ್ ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿ ಪ್ರಾಸ್ತಾವಿಕ ಭಾಷಣ ಮಾಡಿ ಸ್ವಾಗತಿಸಿದರು.

ಆಮ್ಚಿ ಮಾಂಯ್ ಪತ್ರಿಕೆಯ ಮಾಜಿ ಸಂಪಾದಕರಾದ ಮುಕ್ತಿ ಪ್ರಕಾಶ್ ನಾಮಾಂಕಿತ ವಂದನೀಯ ಗುರು ಫ್ರಾನ್ಸಿಸ್ ಡಿಸೋಜ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಅಕಾಡೆಮಿಯು ಸಾಹಿತ್ಯ ಕಾರ್ಯಕ್ರಮಗಳನ್ನು ಊರೂರುಗಳಲ್ಲಿ ಹಮ್ಮಿಕೊಂಡು ಅಕಾಡೆಮಿಯ ಇರುವಿಕೆಯನ್ನು ಕೊಂಕಣಿಗರಲ್ಲಿ ತೋರ್ಪಡಿಸುತ್ತದೆ ಇಂತಹ ಕಾರ್ಯಕ್ರಮಗಳಿಂದ ಕೊಂಕಣಿ ಭಾಷೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವ ಒಳ್ಳೆ ಕೆಲಸಗಳನ್ನು ಮಾಡುತ್ತಿದೆ ಎಂದರು.

ಹಿರಿಯ ಸಾಹಿತಿ ಶ್ರೀಯುತ ಡೊಲ್ಪಿ ಎಫ್ ಲೋಬೊ ರವರು ಕೊಂಕಣಿ ಭಾಷೆ ಹಾಗೂ ಸಾಹಿತ್ಯದ ವಿಷಯದಲ್ಲಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ನಂತರ ಹಿರಿಯ ಸಾಹಿತಿಗಳಾದ ಶ್ರೀ ಮಾರ್ಸೆಲ್ ಡಿಸೋಜ(ಮಾಚ್ಚಾ ಮಿಲಾರ್) ರವರು ಸಂವಾದ ಕಾರ್ಯಕ್ರಮವನ್ನು ನಡೆಸಿ ಕೊಂಡರು. ಶ್ರೀಮತಿ ಜೆನೆಟ್ ಡಿಸೋಜ ರವರು ಧನ್ಯವಾದಗಳನ್ನು ಸಮರ್ಪಿಸಿದರು. ಅಕಾಡೆಮಿ ಸದಸ್ಯರಾದ ರೊನಾಲ್ಡ್ ಕ್ರಾಸ್ತಾರವರು ಕಾರ್ಯಕ್ರಮ ನಿರೂಪಿಸಿದರು.


Spread the love
Subscribe
Notify of

0 Comments
Inline Feedbacks
View all comments