ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the love

ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕದ ನಾಲ್ಕು ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್​  ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

ನಾಮಪತ್ರ ಸಲ್ಲಿಸಲು ಒಂದು ದಿನ (ಫೆಬ್ರವರಿ 15) ಬಾಕಿ ಇರುವಾಗಲೇ ಕಾಂಗ್ರೆಸ್ ಮೂರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇಬ್ಬರಿಗೆ ಮತ್ತೆ ಅವಕಾಶ ನೀಡಿದೆ. ಇನ್ನೊಂದು ಸ್ಥಾನಕ್ಕೆ ಹೊಸ ಮುಖಕ್ಕೆ ಮಣೆ ಹಾಕಿದೆ. ಜಿ.ಸಿ.ಚಂದ್ರಶೇಖರ್‌ ಮತ್ತು ನಾಸೀರ್ ಹುಸೇನ್‌ ಅವರಿಗೆ ಕಾಂಗ್ರೆಸ್ ಮತ್ತೊಮ್ಮೆ ಟಿಕೆಟ್‌ ನೀಡಿದೆ. ಇನ್ನು ಎಐಸಿಸಿ ಖಜಾಂಚಿ ಅಜಯ್‌ ಮಕೇನ್‌ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ನೀಡಲಾಗಿದೆ.


Spread the love