Home Mangalorean News Kannada News ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಮುಂಗಾರು 2017

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಮುಂಗಾರು 2017

Spread the love

ಕರ್ನಾಟಕರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಮುಂಗಾರು 2017

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟಕ್ಕೆ ಬೆಳೆ ವಿಮೆ ಯೋಜನೆಯಡಿ ನೋದಣಿಗಾಗಿ ಅಧಿಸೂಚಿಸಲಾಗಿದೆ.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‍ಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಳೆಯಾಶ್ರಿತ ಭತ್ತದ ಬೆಳೆಗೆ ಪ್ರತಿ ಹೆಕ್ಟೇರ್‍ಗೆರೂ.54000 ವಿಮಾ ಮೊತ್ತ ಹಾಗೂ ರೂ.1080 (2%) ವಿಮಾ ಕಂತಿನ ದರ ಆಗಿರುತ್ತದೆ.
ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನಾಂಕವಾಗಿದ್ದು, ಬೆಳೆ ಸಾಲ ಪಡೆಯದ ರೈತರು ಪಹಣಿಪತ್ರ ಖಾತೆ/ಪಾಸ್‍ಪುಸ್ತಕ, ಕಂದಾಯ ರಸೀದಿಗಳನ್ನು ಒದಗಿಸಿ ಸ್ಥಳೀಯ ಸಾಲ ನೀಡುವ ವಾಣಿಜ್ಯ ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.
ಬೆಳೆ ವಿಮಾ ಯೋಜನೆಯಿಂದ ರೈತರಿಗೆ ಪ್ರಯೋಜನಗಳು ಈ ಮುಂದಿನಂತಿವೆ.
ಅಧಿಸೂಚಿತ ಘಟಕದಲ್ಲಿ ಬಿತ್ತನೆಯಿಂದ ಕಟಾವಿನ ಪೂರ್ವದವರೆಗೆ ನಿರೀಕ್ಷಿತ ಇಳುವರಿಯು, ಪ್ರಾರಂಭಿಕ ಇಳುವರಿಯ ಶೇ.50ಕ್ಕಿಂತ ಕಡಿಮೆ ಇದ್ದಲ್ಲಿ ಅಥವಾ ಬೆಳೆ ನಷ್ಟ ಕಂಡುಬಂದಲ್ಲಿ ಮುಂಚಿತವಾಗಿ ವಿಮೆ ಮಾಡಿದ ರೈತರಿಗೆ ಶೇ.25 ರಷ್ಟು ಬೆಳೆ ನಷ್ಟ ಪರಿಹಾg ದೊರೆಯಲಿದೆÀ. ಬೆಳೆ ಕಟಾವಿನ ವಾಸ್ತವಿಕ ಇಳುವರಿ ಆಧಾರದ ಮೇಲೆ ಅಂತಿಮ ಬೆಳೆ ನಷ್ಠ ಪರಿಹಾರದಲ್ಲಿ ಹೊಂದಾಣಿಕೆ.
ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ, ಬೆಳೆ ಮುಳುಗಡೆಯಿಂದ ಬೆಳೆ ಹಾನಿಯಾದಲ್ಲಿ ವೈಯಕ್ತಿಕವಾಗಿ ಪರಿಹಾರ ದೊರೆಯಲಿದ್ದು, ಅಧಿಸೂಚಿಸಿದ ಘಟಕದಲ್ಲಿ ಶೇ.25ಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಬೆಳೆ ನಷ್ಟವಾದಲ್ಲಿ ವಿಮೆಗೆ ಒಳಪಟ್ಟ ಬೆಳೆ ನಷ್ಠವಾದ ರೈತರಿಗೆ ಮಾದರಿ ಸಮೀಕ್ಷೆಗೆ ಅನುಗುಣವಾಗಿ ಪರಿಹಾರ.
ಕಟಾವಿನ ನಂತರದ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ (14 ದಿನಗಳ ಒಳಗೆ) ಚಂಡಮಾರುತ, ಅಕಾಲಿಕ ಮಳೆಯಿಂದ ಬೆಳೆ ನಾಶವಾದಲ್ಲಿ ವೈಯಕ್ತಿಕವಾಗಿ ಪರಿಹಾರ ದೊರೆಯಲಿದೆ. ಮೇಲಿನ ಎರಡೂ ಸಂದರ್ಭದಲ್ಲಿ ರೈತರು ವಿಮಾ/ಆರ್ಥಿಕ ಸಂಸ್ಥೆಗೆ 48 ಗಂಟೆಗಳ ಒಳಗಾಗಿ ಬೆಳೆ ಹಾನಿ ವಿವರದ ಮಾಹಿತಿ ಒದಗಿಸಬೇಕಾಗಿರುತ್ತದೆ.
ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿ ಅಧಿಸೂಚಿತ ಘಟಕದಲ್ಲಿ ಶೇ.75ರಷ್ಟು ಬಿತ್ತನೆಯಾಗದಿದ್ದಲ್ಲಿ ವಿಮಾ ಮೊತ್ತದ ಶೇ.25ರಷ್ಟು ಪರಿಹಾರ
ಬೆಳೆ ಸಾಲ ಪಡೆಯದರೈತರು ಬಿತ್ತನೆ ಪೂರ್ವದಲ್ಲೇ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದ್ದು, ತರುವಾಯ ಬೇರೆ ಬೆಳೆ ಬಿತ್ತನೆ ಮಾಡಿದಲ್ಲಿ ನೋಂದಾವಣೆಗೆ ನಿಗದಿಪಡಿಸಿದ ಕೊನೆಯ ದಿನಾಂಕದ 30 ದಿವಸಗಳ ಒಳಗೆ ಸಂಬಂಧಪಟ್ಟ ಆರ್ಥಿಕ ಸಂಸ್ಥೆಗಳಲ್ಲಿ ಬಿತ್ತನೆ ದೃಢೀಕರಣದೊಂದಿಗೆ ವಿಮೆ ಮಾಡಿಸಿದ ಬೆಳೆ ಬದಲಾಯಿಸಿಕೊಳ್ಳಲು ಅವಕಾಶವಿದೆ. ಅಂತಹ ಸಂದರ್ಭಗಳಲ್ಲಿ ಹೆಚ್ಚುವರಿ ವಿಮಾಕಂತಿನ ವ್ಯತ್ಯಾಸದ ಮೊತ್ತವನ್ನು ರೈತರು ಭರಿಸಬೇಕಾಗಿರುತ್ತದೆ ಅಥವಾ ರೈತರಿಗೆ ಹಿಂದಿರುಗಿಸಲಾಗುವುದು.
ಬೆಳೆ ಸಾಲ ಪಡೆದರೈತರಿಗೆ ಬೆಳೆ ವಿಮೆ ಕಡ್ಡಾಯ, ಬೆಳೆ ಸಾಲ ಪಡೆಯದ ರೈತರಿಗೆ ಐಚ್ಛಿಕ.
ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಕೃಷಿ ಇಲಾಖೆಯ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.


Spread the love

Exit mobile version