ಕರ್ನಾಟಕ ವಿಧಾನಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಆರಂಭ

Spread the love

ಕರ್ನಾಟಕ ವಿಧಾನಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಆರಂಭ

ಉಡುಪಿ: ಇಡೀ ದೇಶದ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಉಡುಪಿ ಜಿಲ್ಲೆಯಲ್ಲಿ ಶನಿವಾರ ಶಾಂತಿಯುತವಾಗಿ ಆರಂಭವಾಗಿದೆ.

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯವರು ತಮ್ಮ ಪತ್ನಿ ದಕ್ಷಾ ಸೊರಕೆ, ಪುತ್ರಿ ದ್ವಿತಿ ಮತ್ತು ಪುತ್ರ ದ್ವಿಶಾನ್ ಜೊತೆ ಹೆಣ್ಮಕ್ಕಳ ಸರಕಾರ ಕಾಲೇಜಿನಲ್ಲಿ ಮತದಾನ ಮಾಡಿದರೆ, ಉಡುಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ತಮ್ಮ ತಾಯಿ ಮಾಜಿ ಸಂಸದೆ ಮನೋರಮಾ ಮಧ್ವರಾಜ್ ಜೊತೆ ಬಂದು ಮಲ್ಪೆಯ  ಶ್ರೀ ನಾರಾಯಣ ಗುರು ಇಂಗ್ಲೀಷ್ ಮಾಧ್ಯಮ ಶಾಲೆಯಲ್ಲಿ ಮತದಾನ ಮಾಡಿದರು.

ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ತಮ್ಮ ಪತ್ನಿ ಬ್ಲೋಸಮ್ ಜೊತೆಗೂಡಿ ಅಜ್ಜರಕಾಡು ವಿವೇಕಾನಂದ ಹೈಸ್ಕೂಲಿನಲ್ಲಿ ಮತದಾನ ಮಾಡಿದರು.


Spread the love