ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ಅನುದಾನ ಕಡಿತ – ಸರ್ಕಾರದ ವಿರುದ್ಧ ಮಕ್ಕಳ ಪ್ರತಿಭಟನೆ

Spread the love

ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ಅನುದಾನ ಕಡಿತ – ಸರ್ಕಾರದ ವಿರುದ್ಧ ಮಕ್ಕಳ ಪ್ರತಿಭಟನೆ

ಮಂಗಳೂರು: ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನೇತೃತ್ವದ ಎರಡು ಶಾಲೆಗಳಿಗೆ ಸರ್ಕಾರ ಅನುದಾನ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಎರಡೂ ವಿದ್ಯಾಕೇಂದ್ರಗಳ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ ನಡೆದಿದೆ.

 ಬಂಟ್ವಾಳ : ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರ ಮತ್ತು ಪುಣಚ ಶ್ರೀದೇವಿ ಶಾಲೆಗಳಿಗೆ ಕೊಲ್ಲೂರು ಮುಕಾಂಬಿಕ ದೇವಾಲಯದಿಂದ ದತ್ತು ಯೋಜನೆಯಡಿ ನೀಡಲಾಗುತ್ತಿದ್ದ ಅನದಾನವನ್ನು ರದ್ದುಗೊಳಿಸಿರುವ ಸರಕಾರದ ನಿಲುವನ್ನು ಖಂಡಿಸಿ ವಿದ್ಯಾರ್ಥಿಗಳ ಮತ್ತು ಪೋಷಕರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದ ಮುಂಭಾಗ ಬಟ್ಟಲು ಹಿಡಿದು ಪ್ರತಿಭಟನೆಗೆ ಕುಳಿತ ವಿದ್ಯಾರ್ಥಿಗಳಿಗೆ ಪೋಷಕರು ,ವಿವಿಧ ಸಂಘಟನೆಯ ಮುಖಂಡರು ಸಾಥ್ ನೀಡಿದರು.ವಿವಿಧ ತರಗತಿಯ ವಿದ್ಯಾರ್ಥಿ,ವಿದ್ಯಾರ್ಥಿನಿಯರು ಶಿಸಿ ಮಾತನಾಡಿ ಸಿದ್ದರಾಮಯ್ಯ ಸರಕಾರದ ಈ ಧೋರಣೆಯನ್ನು ಖಂಡಿಸಿದರು. ಒಂದು ಹಂತದಲ್ಲಿ  ಸಿಎಂ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರಮಾನಾಥ ರೈ ಅವರ ವಿರುದ್ದ ದಿಕ್ಕಾರ ಕೂಗಿದರು. ತಮ್ಮ ಕಿಸೆಯ ಹಣದಿಂದ ಕೊಲ್ಲೂರು ದೇವಳ ಅನ್ನ ನೀಡುತ್ತಿಲ್ಲ, ಭಕ್ತರು ಹಾಕಿದ ಹಣದಿಂದ ಅನ್ನ ನೀಡುತ್ತಿದೆ. ರಾಜಕೀಯ ದ್ವೇಷಕ್ಕಾಗಿ ಅನುದಾನವನ್ನು ರದ್ದುಗೊಳಿಸಿ ನಮ್ಮ ಒಂದು ಹೊತ್ತಿನ ತತ್ತು ಅನ್ನಕ್ಕೆ ಮಣ್ಣ ಹಾಕಿದ ನಿಮಗೆ ನಮ್ಮ ಶಾಪ ತಟ್ಟಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅನದಾನ ರದ್ದು ಆದೇಶವನ್ನು ಕೂಡಲೇ ವಾಪಾಸು ಪಡೆದು ಮುಕಾಂಬಿಕೆ ಅನ್ನ ಪ್ರಸಾದ ಮತ್ತೆ ಮುಂದುವರಿಯಬೇಕು ಇಲ್ಲದಿದ್ದಲ್ಲಿ ಮುಂದಿನ ವಿದ್ಯಾರ್ಥಿಶಕ್ತಿ ಎನೆಂಬುದನ್ನು ಸರಕಾರ, ಜಿಲ್ಲಾ ಉಸ್ತುವಾರಿ ಸಚಿವರಿಗೆ ತೊರಿಸುತ್ತವೆ ಎಂದು ಎಚ್ಚರಿಸಿದರು.

ಶಾಲಾ ಅಧ್ಯಾಪಕ,ಅದ್ಯಾಪಿಕಿಯರು ಹಾಜರಿದ್ದರು. ಸುಮಾರು ಮೂರು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕೊನೆಗೆ ತಹಶೀಲ್ದರರ ಮೂಲಕ ಮನವಿ ಸಲ್ಲಿಸಲಾಯಿತು. ಬಿಗು ಪೊಲೀಸ್ ಬಂದೋಬಸ್ತು ಎರ್ಪಡಿಸಲಾಗಿತ್ತು.

ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುತ್ತಿದ್ದ ಶ್ರೀರಾಮ ವಿದ್ಯಾ ಹಾಗೂ ಶ್ರೀದೇವಿ ವಿದ್ಯಾ ಕೇಂದ್ರಕ್ಕೆ ಬರುತ್ತಿದ್ದ ಅನುದಾನವನ್ನು ಸರ್ಕಾರ ಕಡಿತಗೊಳಿಸಿದೆ. ಕಳೆದ ಹತ್ತು ವರ್ಷಗಳಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಈ ಶಾಲೆಗಳಿಗೆ ಅನುದಾನ ನೀಡಲಾಗ್ತಿತ್ತು. ಈ ಎರಡು ಶಾಲೆಗಳನ್ನು ಕೊಲ್ಲೂರು ಮೂಕಾಂಬಿಕಾ ದೇವಾಲಯ ದತ್ತು ಪಡೆದುಕೊಂಡಿತ್ತು.

ಕಳೆದ ಹತ್ತು ವರ್ಷಗಳಲ್ಲಿ ಕೊಲ್ಲೂರು ದೇಗುಲದಿಂದ 2.83 ಕೋಟಿ ಅನುದಾನ ನೀಡಲಾಗಿತ್ತು. ಶ್ರೀರಾಮ ವಿದ್ಯಾಕೇಂದ್ರಕ್ಕೆ 2.32 ಕೋಟಿ ರೂ. ನೆರವು ಲಭಿಸಿತ್ತು. ಹಾಗೆ ಬಂಟ್ವಾಳದ ಪುಣಚ ಶ್ರೀದೇವಿ ವಿದ್ಯಾಕೇಂದ್ರಕ್ಕೆ 50.72 ಲಕ್ಷ ನೆರವು ಲಭಿಸಿತ್ತು. ಇದೀಗ ಕೊಲ್ಲೂರು ದೇಗುಲ ದತ್ತು ತೆಗೆದುಕೊಂಡಿದ್ದ ಆದೇಶ ಹಿಂದಕ್ಕೆ ಪಡೆಯಲಾಗಿದ್ದು, ದೇವಸ್ಥಾನದ ದುಡ್ಡು ಶಾಲೆಗೆ ನೀಡಬಾರದೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.


Spread the love