ಕಲ್ಸಂಕ ಜಂಕ್ಷನ್ ಸುಗಮ ಸಂಚಾರಕ್ಕೆ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿಯೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ
ಉಡುಪಿ: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ ವಾಹನವನ್ನು ಕುಂಜಿಬೆಟ್ಟು, ಕಡಿಯಾಳಿ ಭಾಗದ ವಾಹನ ಸಿಟಿ ಬಸ್ ನಿಲ್ದಾಣದ ವರೆಗೆ ತಲುಪಿ ಸಾಗಿ ಬರುವಂತೆ ಮಾಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸಿ ಈ ಹಿಂದಿನಂತೆ ಸುಗಮ ಸಂಚಾರಕ್ಕೆ ಅವಕಾಶ ಮಾಡುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಯವರಿಗೆ ತಿಳಿಸಿದರು.
ನಗರಸಭೆ ವತಿಯಿಂದ ಪೊಲೀಸ್ ಇಲಾಖೆಯ ಮಾರ್ಗಸೂಚಿಯಂತೆ ಶೀಘ್ರವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಈಗಾಗಲೇ ಕ್ರಮ ವಹಿಸಲಾಗಿದೆ.
ಕಲ್ಸಂಕ ಜಂಕ್ಷನ್ ಸಂಚಾರ ನಿರ್ಬಂಧದಿಂದಾಗಿ ಇದೀಗ ಕುಂಜಿಬೆಟ್ಟು ಹಾಗೂ ಸಿಟಿ ಬಸ್ ನಿಲ್ದಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಕಡಿಯಾಳಿ ದೇವಸ್ಥಾನ, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಸಮಸ್ಯೆಯ ಗಂಭೀರತೆ ಪರಿಗಣಿಸಿ ತಕ್ಷಣ ಸುಗಮ ಸಂಚಾರಕ್ಕೆ ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆಗ್ರಹ ಮಾಡಿದರು
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಸದಸ್ಯರಾದ ಗಿರೀಶ್ ಅಂಚನ್, ಹಾಗೂ ಸ್ಥಳೀಯ ಮುಖಂಡರಾದ ವಿಷ್ಣು ಪ್ರಸಾದ್ ಪಾಡಿಗಾರ್, ಸತೀಶ್ ಕುಲಾಲ್, ಶಶಿಧರ್ ಭಟ್, ಚಂದ್ರಕಾಂತ್, ಉಮೇಶ್ ಪೈ, ರಾಜ ಜತ್ತನ್ನ, ನರಸಿಂಹ ಕಿಣಿ ಉಪಸ್ಥಿತರಿದ್ದರು.