Home Mangalorean News Kannada News ಕಾಂಗ್ರೆಸ್ ಉಡುಪಿ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕೃಷ್ಣಮೂರ್ತಿ ಆಚಾರ್ಯ ನೇಮಕ

ಕಾಂಗ್ರೆಸ್ ಉಡುಪಿ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕೃಷ್ಣಮೂರ್ತಿ ಆಚಾರ್ಯ ನೇಮಕ

Spread the love
RedditLinkedinYoutubeEmailFacebook MessengerTelegramWhatsapp

ಕಾಂಗ್ರೆಸ್ ಉಡುಪಿ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕೃಷ್ಣಮೂರ್ತಿ ಆಚಾರ್ಯ ನೇಮಕ

ಉಡುಪಿ: ಉಡುಪಿಯ ಸಮಾಜ ಸೇವಕ ಮತ್ತು ಹಲವಾರು ಸಂಘಟನೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಉಡುಪಿ ಕಿನ್ನಿಮುಲ್ಕಿಯ ಕೃಷ್ಣಮೂರ್ತಿ ಆಚಾರ್ಯ ಇವರನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್. ನಿತ್ಯಾನಂದ ಶೆಟ್ಟಿಯವರ ಸೂಚನೆಯ ಮೇರೆಗೆ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ದಿನೇಶ್ ಪುತ್ರನ್ರವರು ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.

ಕಾಂಗ್ರೆಸ್-ಜೆ.ಡಿ.ಎಸ್. ಮೈತ್ರಿ ಅಭ್ಯರ್ಥಿ ಹಾಗೂ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ರವರು ಉಡುಪಿ ಕಾಂಗ್ರೆಸ್ ಭವನದಲ್ಲಿ ಸರಳ ಸಮಾರಂಭದಲ್ಲಿ ಇವರ ನೇಮಕಾತಿ ಆದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ದಿನೇಶ್ ಪುತ್ರನ್, ಎಂ. ಎ. ಗಫೂರ್, ದಿವಾಕರ್ ಕುಂದರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ವಾಸುದೇವ ಯಡಿಯಾಳ್, ಸತೀಶ್ ಅಮೀನ್ ಪಡುಕೆರೆ, ಬಿ. ನರಸಿಂಹ ಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.


Spread the love

Exit mobile version