ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ; 4 ಕ್ಷೇತ್ರ ಬಾಕಿ – ಡಿಕೆ ಶಿವಕುಮಾರ್

Spread the love

ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ; 4 ಕ್ಷೇತ್ರ ಬಾಕಿ – ಡಿಕೆ ಶಿವಕುಮಾರ್

ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನ ಏಳು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 8 ರಂದು ಬಿಡುಗಡೆ ಮಾಡಿದೆ. ಇನ್ನುಳಿದಂತೆ 21 ಅಭ್ಯರ್ಥಿಗಳ ಕುರಿತು ಇಂದು ಅಥವಾ ನಾಳೆ ಬೆಳಗ್ಗೆ ಒಳಗಡೆ ಹೊರ ಬೀಳಲಿದೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ 17 ಅಭ್ಯರ್ಥಿಗಳನ್ನ ಅಂತಿಮಗೊಳಿಸಲಾಗಿದೆ. ಇನ್ನು ನಾಲ್ಕು ಕ್ಷೇತ್ರದ ಬಗ್ಗೆ ಚರ್ಚೆ ನಡೆಯುತ್ತಿದೆ. ಬೆಂಗಳೂರಿಗೆ ಹೋಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುತ್ತದೆ ಎಂದಿದ್ದಾರೆ.

ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು 5 ಹೆಣ್ಣು ಮಕ್ಕಳಿಗೆ ಟಿಕೆಟ್ ನೀಡಿದ್ದೇವೆ. ಜೊತೆಗೆ ಶೇಕಡ 50ರಷ್ಟು ಹೆಚ್ಚು ಟಿಕೆಟ್ಗಳನ್ನ ಈ ಸಲ ಯುವಕರಿಗೆ ನೀಡಿದ್ದೇವೆ. ಕೋಲಾರ ಲೋಕಸಭೆಯಲ್ಲಿ ಗೊಂದಲ ಇರುವ ವಿಚಾರ, ‘ಎರಡು ಕಡೆಯ ಬೆಂಬಲಿಗರು ಬಂದು ಭೇಟಿಯನ್ನ ಮಾಡಿದ್ದಾರೆ. ಅಂತಿಮವಾಗಿ ನಾವು ನಿರ್ಧಾರವನ್ನ ಕೈಗೊಳ್ಳುತ್ತೇವೆ ಎಂದರು. ಇದೇ ವೇಳೆ ಕುಟುಂಬ ರಾಜಕಾರಣ ಮುಂದುವರೆದಿರುವ ವಿಚಾರ, ‘ಯಡಿಯೂರಪ್ಪನವರ ಮನೆಯಲ್ಲಿ ಕುಟುಂಬ ರಾಜಕಾರಣ ಇಲ್ವಾ ಎಂದು ಪ್ರಶ್ನಿಸಿದ ಅವರು, ಈ ಬಾರಿ ಜೊತೆಗೆ ರಾಜಕೀಯವಾಗಿ ಸದೃಢ ಇರುವ ನಾಯಕರಿಗೆ ಟಿಕೆಟ್ ನೀಡಿದ್ದೇವೆ ಎಂದು ಹೇಳಿದರು.

ಇನ್ನು ಕಾಂಗ್ರೆಸ್ನಿಂದ ಬಿಜೆಪಿ ನಾಯಕರಿಗೆ ಗಾಳ ವಿಚಾರ, ‘ಈ ಕುರಿತು ಬಹಿರಂಗವಾಗಿ ಮಾತನಾಡಲು ಡಿಕೆ ಶಿವಕುಮಾರ್ ನಿರಾಕರಿಸಿದ್ದಾರೆ. ಬೇರೆ ಪಕ್ಷದ ನಾಯಕರು ಕಾಂಗ್ರೆಸ್ಗೆ ಬರುವ ಬಗ್ಗೆ ಬಹಿರಂಗವಾಗಿ ಮಾತನಾಡಲ್ಲ, ಕೆಲವು ಸಂಸದರು ಕಾಂಗ್ರೆಸ್ ಸೇರ್ಪಡೆ ವಿಚಾರ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಡಿ.ಕೆ.ಶಿವಕುಮಾರ್ ನನಗೆ ವಿಷವಿಟ್ಟಿದ್ದಾರೆಂದು ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ವಿಚಾರ, ‘ನಾನೇದರೂ ಸಮ್ಮಿಶ್ರ ಸರ್ಕಾರ ಬೀಳಿಸಿದ್ರೆ ನಾನು ನಂಬುವ ದೇವರು ನನಗೆ ಶಿಕ್ಷೆ ಕೊಡಲಿ ಎಂದರು.


Spread the love