ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಮಣಿದು ಪ್ರಮೋದ್ ಮಧ್ವರಾಜ್ ಮೇಲೆ ಎಫ್ಐಆರ್ : ಯಶ್ಪಾಲ್ ಸುವರ್ಣ ಆಕ್ರೋಶ

Spread the love

ಕಾಂಗ್ರೆಸ್ ಸರ್ಕಾರದ ಒತ್ತಡಕ್ಕೆ ಮಣಿದು ಪ್ರಮೋದ್ ಮಧ್ವರಾಜ್ ಮೇಲೆ ಎಫ್ಐಆರ್ : ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ: ಮಲ್ಪೆಯಲ್ಲಿ ಮಲ್ಪೆ ಮೀನುಗಾರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮೇಲೆ ಪೊಲೀಸ್ ಇಲಾಖೆ ಕಾಂಗ್ರೆಸ್ ಸರಕಾರದ ಒತ್ತಡಕ್ಕೆ ಮಣಿದು ಎಫ್ ಐ ಆರ್ ದಾಖಲಿಸಿದೆ ಎಂದು ಉಡುಪಿ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳಾ ಮೀನುಗಾರರ ಮೇಲೆ ದಲಿತ ದೌರ್ಜನ್ಯ ಕಾಯಿದೆಯಡಿ ಕಾಂಗ್ರೆಸ್ ಸರಕಾರದ ನಿರ್ದೇಶನದಂತೆ ಕೇಸು ದಾಖಲಿಸಿದ ಪೋಲೀಸ್ ಇಲಾಖೆಯ ಲೋಪವನ್ನು ಪ್ರಶ್ನಿಸಿದ ಮಾಜಿ ಸಚಿವರ ಮೇಲೆ ಸ್ವಯಂಪ್ರೇರಿತ ಕೇಸು ದಾಖಲಿಸುವ ಮೂಲಕ ಮೀನುಗಾರರ ಪರ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಯತ್ನ ಮಾಡುತ್ತಿದೆ.

ಕರಾವಳಿ ಜಿಲ್ಲೆಯ ಮೀನುಗಾರರ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ಕೈಗೊಂಬೆಯಾಗಿ ಪೊಲೀಸ್ ಇಲಾಖೆ ಕಾರ್ಯ ನಿರ್ವಹಿಸುತ್ತಿರುವುದು ತೀರ ಖಂಡನಾರ್ಹ, ಪದೇ ಪದೇ ಮೀನುಗಾರರ ತಾಳ್ಮೆ ಪರೀಕ್ಷಗೆ ಮುಂದಾಗು ತ್ತಿದ್ದು ಜಿಲ್ಲೆಯ ಪ್ರಜ್ಞಾವಂತ ಜನತೆ ಈ ಬಗ್ಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments