ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ರಾಜ್ಯ ಕಾರ್ಯದರ್ಶಿಯಾಗಿ ಶಿವಾಜಿ ಸುವರ್ಣ ಬೆಳ್ಳೆ ನೇಮಕ
ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯನ್ನಾಗಿ ಹಿರಿಯ ಕಾಂಗ್ರೆಸ್ ಧುರೀಣ, ಬೆಳ್ಳೆ ಸಿಎ ಬ್ಯಾಂಕ್ ಅಧ್ಯಕ್ಷ ಶಿವಾಜಿ ಎಸ್. ಸುವರ್ಣ ಬೆಳ್ಳೆ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಕಾಪು ಶಾಸಕ ವಿನಯ್ ಕುಮಾರ್ ಸೊರಕೆ, ಕರ್ನಾಟಕ ಸರಕಾರದ ಮುಖ್ಯ ಸಚೇತಕ ಐವನ್ ಡಿಸೋಜಾ ಅವರ ಶಿಫಾರಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮೀನಾರಾಯಣ ಅವರು ನೇಮಿಸಿ ಆದೇಶ ಹೊರಡಸಿದ್ದಾರೆ.
ಕರ್ನಾಟಕ ಸರಕಾರದ ಮುಖ್ಯ ಸಚೇತಕ ಐವನ್ ಡಿ’ಸೋಜ ಅವರು ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ನೇಮಕದ ಆದೇಶ ಪ್ರತಿಯನ್ನು ಶಿವಾಜಿ ಎಸ್. ಸುವರ್ಣ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ಡಾ| ಜಯಮಾಲಾ, ಕರ್ನಾಟಕ ಪ್ರದೇಶ ಅಲ್ಪಸಂಖ್ಯಾಕ ಘಟಕದ ಸಂಚಾಲಕ ಅಬ್ದುಲ್ ರೆಹಮಾನ್ ಹೆಜಮಾಡಿ ಉಪಸ್ಥಿತರಿದ್ದರು.