ಕಾರ್ಕಳ: ದುರ್ಗಾ ಫಾಲ್ಸ್ ಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು

Spread the love

ಕಾರ್ಕಳ: ದುರ್ಗಾ ಫಾಲ್ಸ್ ಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು

ಕಾರ್ಕಳ: ಸಹಪಾಠಿ ವಿದ್ಯಾರ್ಥಿಗಳೊಂದಿಗೆ ದುರ್ಗಾ ಫಾಲ್ಸ್ ಗೆ ಈಜಲು ತೆರಳಿದ್ದ ವಿದ್ಯಾರ್ಥಿಯೋರ್ವ ನೀರುಪಾಲಾದ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಉಡುಪಿ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಜಾಯಲ್ ಡಯಾಸ್(19) ಎಂದು ಗುರುತಿಸಲಾಗಿದೆ. ಈತ ಬಿಕಾಂ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.

ಗುರುವಾರ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳ ತಂಡ ದುರ್ಗಾ ಫಾಲ್ಸ್ ಗೆ ಬಂದಿದ್ದು ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಜಾಯಲ್ ಡಯಾಸ್ ಆಯತಪ್ಪಿ ನೀರು ಪಾಲಾಗಿದ್ದಾನೆ ಎನ್ನಲಾಗಿದೆ.

ಕಾರ್ಕಳ ನಗರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.


Spread the love