Home Mangalorean News Kannada News ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ನಾಪತ್ತೆ

ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ನಾಪತ್ತೆ

Spread the love

ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ನಾಪತ್ತೆ

ಉಡುಪಿ: ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೆಬಲ್ ನಾಪತ್ತೆಯಾಗಿರುವ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾಪತ್ತೆಯಾಗಿರುವ ವ್ಯಕ್ತಿಯನ್ನು ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಅವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಗುರುವಾರ ರಾತ್ರಿ 7.30ಕ್ಕೆ ಹೆಂಡತಿಗೆ ಫೋನ್ ಮಾಡಿ ನಾನು ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ ಹೇಳಿದ್ದಾರೆ. ನಂತರ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿಯಿಡೀ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಗಾಬರಿಯಾಗಿರುವ ಪತ್ನಿ ಪೂಜಾ ಶೆಟ್ಟಿಯವರು ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.

2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೆಬಲ್ ಆಗಿ ಬಂದಿದ್ದರು. ಅ.17ರಂದು ಕರ್ತವ್ಯಕ್ಕೆ ಹಾಜರಾಗಿದ್ದರು.

ಶೃತಿನ್ ಶೆಟ್ಟಿಯವರನ್ನು ಯಾರಾದರೂ ಕಂಡರೆ 0820-2555452 ನಂಬರ್ ಸಂಪರ್ಕಿಸಲು ಕೋರಲಾಗಿದೆ. ಶೃತಿನ್ ಶೆಟ್ಟಿ ಕನ್ನಡ, ಇಂಗ್ಲಿಷ್, ಹಿಂದಿ, ತುಳು ಭಾಷೆ ಮಾತನಾಡುತ್ತಾರೆ.


Spread the love

Exit mobile version