ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ಹುತಾತ್ಮರ ಹೆಸರಿನಲ್ಲಿ 527 ಗಿಡ ನೆಟ್ಟ ವಿದ್ಯಾರ್ಥಿಗಳು

Spread the love

ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ಹುತಾತ್ಮರ ಹೆಸರಿನಲ್ಲಿ 527 ಗಿಡ ನೆಟ್ಟ ವಿದ್ಯಾರ್ಥಿಗಳು

ಉಡುಪಿ: ಸಂಚಲನ (ರಿ) ಸಾಮಾಜಿಕ ಸ್ವಯಂ ಸೇವಾ ಸಂಘಟನೆ ಹಾಗೂ ಉಡುಪಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ಆಯೋಜಿಸಿದ್ದ ‘ಕಾರ್ಗಿಲ್ ವಿಜಯ ದಿವಸ’ ಕಾರ್ಯಕ್ರಮದಲ್ಲಿ ಗುರುವಾರ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ 527 ಹುತಾತ್ಮರ ಹೆಸರಿನಲ್ಲಿ 527 ಗಿಡ ನೆಡುವುದರ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಾದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಚಲನ ಅಧ್ಯಕ್ಷರಾದ ಪ್ರೇಮ್ ಪ್ರಸಾದ್ ಶೆಟ್ಟಿಯವರು, ‘ ನಮ್ಮ ಸಂಸ್ಥೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ 4 ವರ್ಷಗಳಿಂದ ಕಾರ್ಗಿಲ್ ವಿಜಯ ದಿವಸವನ್ನು 527 ಹುತಾತ್ಮರ ಹೆಸರಿನಲ್ಲಿ 527 ಗಿಡ ನೆಡುವ ಮೂಲಕ ಆಚರಿಸುತ್ತಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ಸೈನಿಕರಿಗೆ ಗೌರವ ನಮನಗಳನ್ನು ಸಲ್ಲಿಸುವುದಷ್ಟೇ ಅಲ್ಲದೆ ಯುವಕರಿಗೆ ಭಾರತೀಯ ಸೇನೆಗೆ ಸೇರಲು ಪ್ರೇರೇಪಿಸುವ ಉದ್ದೇಶವನ್ನೂ ಹೊಂದಿದೆ’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶಿವಾನಂದ ಕಾಪಶಿ, ಜಿಲ್ಲಾ ಮಾಜಿ ಸೈನಿಕರ ವೇದಿಕೆಯ ಅಧ್ಯಕ್ಷರಾದ ಗಿಲ್ಬರ್ಟ್ ಬ್ರಗಾಂಝ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಇದರ ಸ್ಟೋರ್ ಹೆಡ್ ಹಫೀಝ್ ರೆಹಮಾನ್ , ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ರೋಶನ್ ಶೆಟ್ಟಿ ಹಾಗೂ ನೂರಾರು ವಿದ್ಯಾರ್ಥಿಗಳು ಮತ್ತು ಸ್ವಯಂಸೇವಕರು ಪಾಲ್ಗೊಂಡರು.


Spread the love