ಕಾಲೇಜಿನ 5 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
ಮಂಗಳೂರು: ಮೂಡಬಿದಿರೆಯ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಮುಂದುವರೆದಿದ್ದು, ಇಂದು ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಲೇಜಿನ 5 ನೇ ಮಹಡಿಯಿಂದ ಹಾರಿ, ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿತ್ರದುರ್ಗ ಮೂಲದ ವಿದ್ಯಾರ್ಥಿನಿ ಮೂಡಬಿದರೆಯ ಕಾಲೇಜ್ ನಲ್ಲಿ ಓದುತ್ತಿದ್ದರು. ಮಧ್ಯಾಹ್ನ ಲೈಬ್ರರಿಯಲ್ಲಿ ಓದುತ್ತಿದ್ದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ಸಿಕ್ಕಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಸಾಗಿಸಲಾಗಿದ್ದು, ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ.