Home Mangalorean News Kannada News ಕಾವೇರಿ ಮಧ್ಯಂತರ ತೀರ್ಪು; ಬೆಂಗಳೂರು ನಗರದಾದ್ಯಂತ ಭುಗಿಲೆದ್ದ ಪ್ರತಿಭಟನೆ

ಕಾವೇರಿ ಮಧ್ಯಂತರ ತೀರ್ಪು; ಬೆಂಗಳೂರು ನಗರದಾದ್ಯಂತ ಭುಗಿಲೆದ್ದ ಪ್ರತಿಭಟನೆ

Spread the love

ಕಾವೇರಿ ಮಧ್ಯಂತರ ತೀರ್ಪು; ಬೆಂಗಳೂರು ನಗರದಾದ್ಯಂತ ಭುಗಿಲೆದ್ದ ಪ್ರತಿಭಟನೆ

ಬೆಂಗಳೂರು: ಕಾವೇರಿ ನೀರು ಹಂಚಿಕೆ ಮತ್ತು ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆ ನಡೆದು ಬರುತ್ತಿದೆ. ಬೆಂಗಳೂರು ನಗರದಲ್ಲಿ ಪ್ರತಿಭಟನೆಗಳು ಕಾವೇರಿದ್ದು ನಗರದಾದ್ಯಂತ ಬಿಗುವಿನ ವಾತಾವರಣ ಹೊಂದಿದೆ.

cauvery-protest-bangalore

ಅದೇ ವೇಳೆ ನಗರದ ಕೆಲವು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಗರದಲ್ಲಿ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಮುಂಜಾಗ್ರತಾ ದೃಷ್ಟಿಯಿಂದ ನಮ್ಮ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ, ವ್ಯಾಪಾರಿಗಳು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿದ್ದಾರೆ.

ಅದೇ ವೇಳೆ ಕೆಲವೊಂದು ಕಿಡಿಗೇಡಿಗಳು ನಗರದಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದು ಇದಕ್ಕೆ ನಗರ ಪೊಲೀಸ್  ಆಯುಕ್ತ ಎನ್. ಎಸ್ ಮೆಘರಿಕ್ ಸ್ಪಷ್ಟನೆ ನೀಡಿದ್ದಾರೆ.

ಕಾವೇರಿ ನೀರು ಹಂಚಿಕೆ ಮತ್ತು ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆ ನಡೆದು ಬರುತ್ತಿದ್ದು, ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿಲ್ಲ ಎಂದು ನಗರ ಪೊಲೀಸ್  ಆಯುಕ್ತ ಎನ್. ಎಸ್ ಮೆಘರಿಕ್ ಹೇಳಿದ್ದಾರೆ.

ನಗರದಲ್ಲಿ ನಿಷೇಧಾಜ್ಞೆ ಹೇರಲಾಗಿದೆ ಹಾಗೂ ಕೆಲವು ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂಬ ವದಂತಿ ಹರಡಿತ್ತು.

ಆದರೆ ಆಯುಕ್ತರು ಈ ರೀತಿಯ ಆದೇಶ ನೀಡಿಲ್ಲ. ನಗರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಜನರು ಶಾಂತಿ ಕಾಪಾಡಬೇಕೆಂದು ಎಂದು ಬೆಂಗಳೂರು ಸಿಟಿ ಪೊಲೀಸ್ ಟ್ವೀಟ್ ಮಾಡಿದ್ದಾರೆ.


Spread the love

Exit mobile version