ಕಾಶ್ಮೀರದಲ್ಲಿ ಉಗ್ರರ ದಾಳಿ: ದಕ ಜಿಲ್ಲೆಯ ಪ್ರವಾಸಿಗರು ಸಮಸ್ಯೆಲ್ಲಿದ್ದರೆ ಕರೆ ಮಾಡಿ
ಮಂಗಳೂರು: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಲಾಮ್ ಇಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ದಾಳಿಯಲ್ಲಿ ಕೆಲವು ಪ್ರವಾಸಿಗರು ಮೃತರಾಗಿರುವ ಹಾಗೂ ಗಾಯಗೊಂಡಿರುವುದು ತಿಳಿದು ಬಂದಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಜಮ್ಮು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿ ಮೇಲ್ಕಂಡ ಘಟನೆಯಲ್ಲಿ ಸಿಲುಕಿಕೊಂಡಿದಲ್ಲಿ ಅಂತಹವರುಗಳ ಮಾಹಿತಿಯನ್ನು ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 0824 2442590. ಅಥವಾ 1077 ಗೆ ಕರೆ ಮಾಡಿ ಮಾಹಿತಿ ನೀಡಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಕೋರಿದೆ