ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡನೀಯ – ಮೊಹಮ್ಮದ್ ನಿಯಾಜ಼್
ಕಾಪು: ಜಮ್ಮು- ಕಾಶ್ಮೀರ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರು ಕರ್ನಾಟಕದವರು ಸೇರಿದಂತೆ 28 ಜನ ಅಮಾಯಕ ಪ್ರವಾಸಿಗರು ಬಲಿಯಾಗಿರುವುದನ್ನು ಕಾಪು ವಿಧಾನಸಭಾಕ್ಷೇತ್ರದ ಯುವಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ, ಹಾಗೂ ಬಲಿಯಾದವರಿಗೆ ಶೃದ್ಧಾಂಜಲಿ ಅರ್ಪಿಸುತ್ತದೆ ಎಂದು ಯುವಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ನಿಯಾಜ್ ಹೇಳಿದ್ದಾರೆ.
ಧರ್ಮದ ಹೆಸರಿನಲ್ಲಿ ಕೊಲ್ಲುವ ಹಿಂಸೆಯನ್ನು ಪ್ರಚೋದಿಸುವ ಕೃತ್ಯ ಖಂಡನಾರ್ಹವಾಗಿದ್ದು. ಕೇಂದ್ರ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಗೊಳ್ಳಬೇಕು. ಇದು ಕೇಂದ್ರ ಬಿಜೆಪಿ ಸರಕಾರದ ಭದ್ರತಾ ವೈಫಲ್ಯ ಕಂಡು ಬರುತ್ತದೆ. ಕೇಂದ್ರ ಸರಕಾರವು ಪಕ್ಷ ಧರ್ಮ ವನ್ನು ಬದಿಗಿಟ್ಟು ಉಗ್ರರನ್ನು ಸದೆಬಡಿಯುವಲ್ಲಿ ಕಾರ್ಯಪ್ರವೃತ್ತರಾಗಿ ರಾಷ್ಟ್ರದ ರಕ್ಷಣೆ ಗೆ ನಿಲ್ಲಬೇಕು ಎಂದು ಕಾಪು ವಿಧಾನಸಭಾಕ್ಷೇತ್ರ ದ ಯುವಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ನಿಯಾಜ಼್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.