ಕುಂದಾಪುರ: ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ನಿಷೇಧ

Spread the love

ಕುಂದಾಪುರ: ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ನಿಷೇಧ

ಕುಂದಾಪುರ: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸೌಪರ್ಣಿಕಾ ನದಿಗೆ ಅಡ್ಡಲಾಗಿ ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿ-66ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ ನಿರ್ಮಿಸಿರುವ ಹಳೆಯ ಸೇತುವೆ ಶಿಥಿಲಗೊಂಡಿದ್ದು, ಅವು ಗಳ ಮೇಲಿನ ವಾಹನ ಸಂಚಾರವನ್ನು ತಕ್ಷಣದಿಂದ ನಿಷೇಧಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1966ರಲ್ಲಿ ನಿರ್ಮಾಣಗೊಂಡಿರುವ ಹಳೆಯ ಸೇತುವೆ ಪ್ರಸ್ತುತ ಶಿಥಿಲ ಗೊಂಡಿದ್ದು, ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲದ ಕಾರಣ ತಕ್ಷಣವೇ ವಾಹನ ಸಂಚಾರವನ್ನು ನಿಷೇಧಿಸುವಂತೆ ಚೆನ್ನೈನ ಆ್ಯಸ್‌ಸಿಸ್ಟಮ್ ಇಂಡಿಯಾ ಲಿ.ವತಿಯಿಂದ ನೇಮಿಸ ಲಾದ ತಜ್ಞರ ತಪಾಸಣಾ ವರದಿಯಲ್ಲಿ ತಿಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ರಾ.ಹೆದ್ದಾರಿ-66ರ ಮುಳ್ಳಿಕಟ್ಟೆ ಸಮೀಪದ ಅರಾಟೆ ಹಳೆ ಸೇತುವೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತ ಗೊಳಿಸಿ, ಈ ಸೇತುವೆಯಲ್ಲಿ ಸಂಚರಿಸುವ ವಾಹನಗಳಿಗೆ ಪಕ್ಕದಲ್ಲೇ ಚತುಷ್ಪಥದ ಹೆದ್ದಾರಿಯಲ್ಲಿ ನಿರ್ಮಾಣ ಗೊಂಡಿರು ವರುವ ಹೊಸ ಸೇತುವೆಯಲ್ಲಿ ಬದಲಿ ಸಂಚಾರ ವ್ಯವಸ್ಥೆಯನ್ನು ಮಾಡಿ ಆದೇಶಿಸಲಾಗಿದೆ.


Spread the love