Home Mangalorean News Kannada News ಕುಂದಾಪುರ: ಈಜುಕೊಳದ ನೀರಿನಲ್ಲಿ ಮುಳುಗಿ ನಾಲ್ಕನೇ ತರಗತಿ ವಿದ್ಯಾರ್ಥಿ ಮೃತ್ಯು

ಕುಂದಾಪುರ: ಈಜುಕೊಳದ ನೀರಿನಲ್ಲಿ ಮುಳುಗಿ ನಾಲ್ಕನೇ ತರಗತಿ ವಿದ್ಯಾರ್ಥಿ ಮೃತ್ಯು

Spread the love
RedditLinkedinYoutubeEmailFacebook MessengerTelegramWhatsapp

ಕುಂದಾಪುರ: ಈಜುಕೊಳದ ನೀರಿನಲ್ಲಿ ಮುಳುಗಿ ನಾಲ್ಕನೇ ತರಗತಿ ವಿದ್ಯಾರ್ಥಿ ಮೃತ್ಯು

ಉಡುಪಿ: ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್ ಗೆ ಕುಟುಂಬ ಸದಸ್ಯರೊಂದಿಗೆ ಪ್ರವಾಸಕ್ಕೆ ತೆರಳಿದ್ದ ನಾಲ್ಕನೇ ತರಗತಿಯ ವಿದ್ಯಾರ್ಥಿಯೋರ್ವ ಈಜುಕೊಳದ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾನೆ.

ಹೊಡೆ ಮೂಲದ ಮುಹಮ್ಮದ್ ಅರೀಝ್ (10) ಮೃತ ವಿದ್ಯಾರ್ಥಿ. ಈತ ಹೂಡೆಯ ದಾರುಸ್ಸಲಾಮ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ. ಗುರುವಾರ ಮನೆ ಮಂದಿಯೊಂದಿಗೆ ಟಿನ್ ಟಾನ್ ಎಡ್ವೆಂಚರ್ಸ್’ ರೆಸಾರ್ಟ್ಗೆ ಹೋಗಿದ್ದ ಸಂದರ್ಭದಲ್ಲಿ ಸ್ವಿಮಿಂಗ್ ಫುಲ್’ನ ನೀರಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಕೊನೆಯುಸಿರೆಳೆದಿದ್ದಾನೆ.

ಮಗುವಿನ ಸಾವಿಗೆ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್ ಅವರ ನಿರ್ಲಕ್ಷ್ಯವೇ ಕಾರಣವೆಂದು ದೂರಿನಲ್ಲಿ ಆರೋಪಿಸಲಾಗಿದೆ. ಲೈಫ್ ಜಾಕೆಟ್, ಲೈಫ್ ಗಾರ್ಡ್ ಇನ್ನಿತರ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಈ ದುರ್ಘಟನೆ ಸಂಭವಿಸಿದೆಯೆಂದು ದೂರಿನಲ್ಲಿ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love

Exit mobile version