ಕುಂದಾಪುರ: ಕೊರೊನಾ ಸೋಂಕಿನ ಭೀತಿಯ ನಡುವೆ ಸಿಇಟಿ ಪರೀಕ್ಷೆ ಆರಂಭ

Spread the love

ಕುಂದಾಪುರ: ಕೊರೊನಾ ಸೋಂಕಿನ ಭೀತಿಯ ನಡುವೆ ಸಿಇಟಿ ಪರೀಕ್ಷೆ ಆರಂಭ

ಕುಂದಾಪುರ: ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನ ಭೀತಿಯ ನಡುವೆ, ಗುರುವಾರ ಮುಂಜಾಗೃತಾ ಕ್ರಮಗಳೊಂದಿಗೆ ಸಿಇಟಿ ಪರೀಕ್ಷೆ ಆರಂಭವಾಗಿದೆ.

ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಪರೀಕ್ಷಾರ್ಥಿಗಳನ್ನು ಹೊಂದಿರುವ ಕುಂದಾಪುರದ ಸರ್ಕಾರಿ ಕಿರಿಯ ಕಾಲೇಜಲ್ಲಿ 552, ಆರ್.ಎನ್. ಶೆಟ್ಟಿ ಕಾಲೇಜಿನಲ್ಲಿ 480 ಹಾಗೂ ಭಂಡಾರ್ಕಾರ್ಸ್ ಕಾಲೇಜಿನಲ್ಲಿ 336 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾವಣೆ ಮಾಡಿಕೊಂಡಿದ್ದು, ಇಂದು ನಡೆದ ಪರೀಕ್ಷೆಗೆ ಇಲ್ಲಿನ ಸಿಇಟಿ ಪರೀಕ್ಷಾ ಕೇಂದ್ರಗಳು ಸರ್ಕಾರಿ ಕಿರಿಯ ಕಾಲೇಜು (366), ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು (306) ಹಾಗೂ ಭಂಡಾರ್ಕಾರ್ಸ್ ಕಾಲೇಜಿನಲ್ಲಿ (225) ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಪರೀಕ್ಷಾ ಕೇಂದ್ರದ ಬಳಿ ವಿದ್ಯಾರ್ಥಿಗಳನ್ನು ಸ್ಯಾನಿಟೈಸಿಂಗ್ ಮಾಡಿ, ದೇಹದ ಉಷ್ಣತೆ ಪರೀಕ್ಷೆ ಮಾಡಿ ಒಳಕ್ಕೆ ಬಿಟ್ಟುಕೊಳ್ಳಲಾಗಿದೆ. ಮಾಸ್ಕ್ ಧಾರಣೆ ಕಡ್ಡಾಯ ಮಾಡಲಾಗಿದೆ. ಅಂತರ ಪಾಲನೆಗೆ ಸೂಚನೆ ನೀಡಲಾಗಿದೆ. ಶಂಕಿತರಿಗಾಗಿ ವಿಶೇಷ ಮೀಸಲು ಕೊಠಡಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಗುರುವಾರ ಜೀವಶಾಸ್ತ್ರ ಹಾಗೂ ಗಣಿತ ಪರೀಕ್ಷೆ ನಡೆದಿದೆ.

ಎನ್.ಎಸ್.ಎಸ್ ಹಾಗೂ ಭಾರತೀಯ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿ ಸ್ವಯಂಸೇವಕರನ್ನು ಪರೀಕ್ಷಾ ಕೇಂದ್ರದ ಹೊರಗೆ ಅಗತ್ಯ ಸೇವೆಗೆ ಬಳಸಿಕೊಳ್ಳಲಾಗಿದೆ.

ಪರೀಕ್ಷೆ ನಡೆಯುವ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಸ್ಥಳದಲ್ಲಿ ಇದ್ದು ಸುಗಮ ಪರೀಕ್ಷೆ ನಡೆಯಲು ಸಹಕರಿಸಿದ್ದಾರೆ


Spread the love