ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ಟೋ ನೇಮಕ

Spread the love

ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ಟೋ ನೇಮಕ

ಕುಂದಾಪುರ: ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

ಪ್ರಾಧಿಕಾರದ ಇತರ ಸದಸ್ಯರನ್ನಾಗಿ ಚಂದ್ರಶೇಖರ ಶೆಟ್ಟಿ, ಚಂದ್ರ ಅಮೀನ್, ಮತ್ತು ಮೊಹಮ್ಮದ್ ಅಲ್ಫಾಝ್ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ಕೆ ಆದೇಶ ಹೊರಡಿಸಿದ್ದಾರೆ.

ಬಿಇ ಪದವಿಧರರಾಗಿರುವ ವಿನೋದ್ ಕ್ರಾಸ್ಟ್ರೋ ಪ್ರಸ್ತುತ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.


Spread the love