ಕುಂದಾಪುರ: ಕನರ್ಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ವಾರಾಹಿ ನೀರಾವರಿ ಯೋಜನೆಯ ಉದ್ಘಾಟನಾ ಸಮಾರಂಭವು ಮೇ 4 ರಂದು ಬೆಳಗ್ಗೆ 11.00 ಗಂಟೆಗೆ ಸರಕಾರಿ ಪ್ರೌಢಶಾಲಾ ಮೈದಾನ, ಸಿದ್ದಾಪುರ ದಲ್ಲಿ ನಡೆಯಲಿದೆ.
ಸಮಾರಂಭವನ್ನು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ರವರು ಉದ್ಘಾಟಿಸುವರು. ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ರಾಜ್ಯದ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ, ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್, ಅರಣ್ಯ ಮತ್ತುಪರಿಸರ ಸಚಿವ ಬಿ.ರಮಾನಾಥ ರೈ ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸುನೀಲ್ ಕುಮಾರ್, ವಿಧಾನ ಪರಿಷತ್ನ ಶಾಸಕರು ಹಾಗೂ ವಿಧಾನಪರಿಷತ್ನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಉಡುಪಿ ಜಿಲ್ಲಾ ಪಂಚಾಯತ್ನ ಅಧ್ಯಕ್ಷರಾದ ಸವಿತಾ ಶಿವಾನಂದ ಕೋಟ್ಯಾನ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶೋಭಾ ಕರಂದ್ಲಾಜೆ, ರಾಜ್ಯ ಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡಿಸ್, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎಸ್.ಯಡಿಯೂರಪ್ಪ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಮೋದ್ ಮಧ್ವರಾಜ್, ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ವಿಧಾನಪರಿಷತ್ನ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಕೆ.ಪ್ರತಾಪ್ಚಂದ್ರ ಶೆಟ್ಟಿ, ಕುಂದಾಪುರ ತಾ.ಪಂ. ಅಧ್ಯಕ್ಷ ಭಾಸ್ಕರ ಬಿಲ್ಲವ, ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷ ಯು.ಸುಧಾಕರ ಶೆಟ್ಟಿ ಭಾಗವಹಿಸುವರು,