ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ಜಾರ್ಜ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ

Spread the love

ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ಜಾರ್ಜ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ

ಉಡುಪಿ: ಇತ್ತೀಚೆಗೆ ನಿಧನ ಹೊಂದಿದ ಕೇಂದ್ರದ ಮಾಜಿ ಸಚಿವ ದಿ| ಜಾರ್ಜ್ ಫೆರ್ನಾಂಡಿಸ್ ಅವರಿಗೆ ಕೆಥೋಲಿಕ್ ಸಭಾ ಉಡುಪಿ ಪ್ರದೇಶದ ವತಿಯಿಂದ ಶ್ರದ್ಧಾಂಜಲಿ ಸಭೆ ಭಾನುವಾರ ಸಂಸ್ಥೆಯ ಕಚೇರಿಯಲ್ಲಿ ಜರುಗಿತು.

ಕೆಪಿಸಿಸಿ ಕಾರ್ಯದರ್ಶಿ ವೆರೋನಿಕಾ ಕರ್ನೆಲಿಯೊ, ಮಾಜಿ ಜಿಪಂ ಅಧ್ಯಕ್ಷರಾದ ಜೆರಾಲ್ಡ್ ಫೆರ್ನಾಂಡಿಸ್ ಅವರು ಜಾರ್ಜ್ ಫೆರ್ನಾಂಡಿಸ್ ಅವರಿಗೆ ನುಡಿನಮನ ಸಲ್ಲಿಸಿ ಅವರು ದೇಶ ರಾಜ್ಯಕ್ಕೆ ನೀಡಿದ ಸೇವೆಯನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಉಡುಪಿ ಶೋಕಮಾತಾ ಇಗರ್ಜಿಯ ಧರ್ಮಗುರು ವಂ ವಲೇರಿಯನ್ ಮೆಂಡೊನ್ಸಾ ಅವರು ತಮ್ಮ ಸಂದೇಶದಲ್ಲಿ ಜಾರ್ಜ್ ಫೆರ್ನಾಂಡಿಸ್ ಅವರು ತನ್ನನ್ನು ಸಮಾಜಕ್ಕಾಗಿ ಆರ್ಪಿಸಿದ ಮಹಾನ್ ನೇತಾರರಾಗಿದ್ದು ಅವರು ಪ್ರತಿಯೊಬ್ಬರಿಗೂ ಆದರ್ಶಪ್ರಾಯರಾಗಿದ್ದಾರೆ ಎಂದರು.

ಸಭೆಯ ಅಧ್ಯಕ್ಷತೆಯನ್ನು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಅಧ್ಯಕ್ಷರಾದ ಆಲ್ವಿನ್ ಕ್ವಾಡ್ರಸ್ ವಹಿಸಿದ್ದರು.

ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ನಿಕಟಪೂರ್ವ ಅಧ್ಯಕ್ಷರಾದ ವಲೇರಿಯನ್ ಫೆರ್ನಾಂಡಿಸ್, ಕಾರ್ಯದರ್ಶಿ ಮೆಕ್ಷಿಮ್ ಡಿಸೋಜಾ ನಿಯೋಜಿತ ಅಧ್ಯಕ್ಷರಾದ ಮೇರಿ ಡಿಸೋಜಾ, ಉಡುಪಿ ಧರ್ಮಪ್ರಾಂತ್ಯದ ಪಾಲನಾ ಮಂಡಳಿಯ ಕಾರ್ಯದರ್ಶಿ ಅಲ್ಫೋನ್ಸ್ ಡಿಕೋಸ್ತಾ, ಉಪಾಧ್ಯಕ್ಷರಾದ ರೋಬರ್ಟ್ ಮಿನೇಜಸ್, ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್ ಹಾಗೂ ಇತರರು ಉಪಸ್ಥಿತರಿದ್ದರು.


Spread the love