Home Mangalorean News Kannada News ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಗೆ ಕೊರೊನಾ ಪಾಸಿಟಿವ್

ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಗೆ ಕೊರೊನಾ ಪಾಸಿಟಿವ್

Spread the love
RedditLinkedinYoutubeEmailFacebook MessengerTelegramWhatsapp

ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಗೆ ಕೊರೊನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೊನಾ ವೈರಸ್ ಹಾವಳಿ ಹೆಚ್ಚುತ್ತಿದ್ದು, ಶಾಸಕರು, ಸಚಿವರನ್ನೂ ಬಿಡದೇ ವೈರಾಣು ಎಲ್ಲೆಡೆ ಹಬ್ಬುತ್ತಿದೆ. ಇದೀಗ ಕಾಂಗ್ರೆಸ್ ಶಾಸಕ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಖುದ್ದು ಟ್ವೀಟ್ ಮಾಡಿ ಮಾಹಿತಿ ನೀಡಿರುವ ದಿನೇಶ್ ಗುಂಡೂರಾವ್, ಕೋವಿಡ್ ಟೆಸ್ಟ್ ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸಿದ್ದಾರೆ.


Spread the love
RedditLinkedinYoutubeEmailFacebook MessengerTelegramWhatsapp

Exit mobile version