ಕೆ.ಎಸ್‌.ಆರ್‌.ಟಿ.ಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

Beautifully crafted traditional Indian gold jewellery for women. The ornaments are known as bangles worn to hands and made up of 22 carat gold.
Spread the love

ಕೆ.ಎಸ್‌.ಆರ್‌.ಟಿ.ಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು
 

ಮಂಗಳೂರು: ಕೆ.ಎಸ್‌.ಆರ್‌.ಟಿ.ಸಿ ಬಸ್‌ನಲ್ಲಿ ಸುಮಾರು 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್‌ಬ್ಯಾಗ್‌ ಕಳವಾಗಿದೆ.

ಮಹಿಳೆಯೋರ್ವರು ನಗರದ ಬ್ಯಾಂಕ್‌ನ ಲಾಕರ್‌ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ನಮೂನೆಯ ಚಿನ್ನದ ಒಡವೆಗಳನ್ನು ಕೌಟುಂಬಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮನೆಗೆ ತಂದು ಹ್ಯಾಂಡ್‌ಬ್ಯಾಗ್‌ನಲ್ಲಿ ಹಾಕಿ ಜೂ.19ರಂದು ಬೆಳಗ್ಗೆ 7 ಗಂಟೆಗೆ ಮಂಗಳೂರಿನಿಂದ ಕೆಎಸ್‌ಆರ್‌ಟಿಸಿ ಐರಾವತ ಬಸ್‌ನಲ್ಲಿ ಇತರ ಲಗೇಜ್‌ ಜತೆ ತೆಗೆದುಕೊಂಡು ಬೆಂಗಳೂರಿಗೆ ಪ್ರಯಾಣಿಸಿದ್ದರು.

ಹಾಸನ ತಲುಪಿದಾಗ ಅವರ ಹ್ಯಾಂಡ್‌ಬ್ಯಾಗ್‌ ಪರಿಶೀಲಿಸಿದಾಗ ಚಿನ್ನಾಭರಣಗಳು ಕಳವಾಗಿದ್ದವು. ಮಂಗಳೂರು – ಹಾಸನ ನಡುವೆ ಅವರ ಪಕ್ಕದಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ನಡು ವಯಸ್ಸಿನ ಮಹಿಳೆ ಕಳವು ಮಾಡಿರಬಹುದೆಂದು ಉರ್ವ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments