ಕೆ.ಜಿ.ಎಫ್. ಬಿಡುಗಡೆ ಹಿನ್ನೆಲೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ಯಶ್ ಭೇಟಿ
ಉಡುಪಿ: ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಕೆ.ಜಿ.ಎಫ್. ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಭಾನುವಾರ ಹೆಲಿಕಾಪ್ಟರ್ ಮೂಲಕ ದೇವಸ್ಥಾನಕ್ಕೆ ಭೇಟಿ ನೀಡಿದ ಯಶ್ ಅವರನ್ನು ದೇವಸ್ಥಾನದ ಮಂಡಳಿ ಸದಸ್ಯರು ಸ್ವಾಗತಿಸಿದರು. ದೇವರ ದರ್ಶನದ ಬಳಿಕ ದೇವಳದ ವತಿಯಿಂದ ವಿಶೇಷ ಗೌರವ ಸಮರ್ಪಣೆ ಮಾಡಲಾಯಿತು.
ಇದೇ ಶುಕ್ರವಾರದಂದು ಕೆ.ಜಿ.ಎಫ್. ಸಿನಿಮಾ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಟ್ರೇಲರ್ ಹಾಗೂ ಲಿರಿಕಲ್ ವಿಡಿಯೋ ಸಾಂಗ್ ಭಾರಿ ಸದ್ದು ಮಾಡುತ್ತಿದೆ. ಕೆ.ಜಿ.ಎಫ್. ಯಶ್ ವೃತ್ತಿ ಜೀವನದ ವಿಶೇಷ ಸಿನಿಮಾ ಆಗಿದ್ದು, ಬರೋಬ್ಬರಿ 5 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಉಗ್ರಂ ಖ್ಯಾತಿಯ ಪ್ರಶಾಂತ್ ನೀಲ್ ಅವರು ಕೆ.ಜಿ.ಎಫ್. ಚಿತ್ರದ ಕತೆ ಬರೆದು ನಿರ್ದೇಶಿಸಿದ್ದಾರೆ.