ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಕ್ಯಾ. ಕಾರ್ಣಿಕ್ ಸಂತಾಪ

Spread the love

ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಕ್ಯಾ. ಕಾರ್ಣಿಕ್ ಸಂತಾಪ
ಮಂಗಳೂರು: ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ಬೆಳಗಾವಿ ಸಂಸದ ಸರಳ ಸಜ್ಜನ ರಾಜಕಾರಣಿ ಶ್ರೀ ಸುರೇಶ್ ಅಂಗಡಿಯವರ ಅಕಾಲಿಕ ನಿಧನಕ್ಕೆ ರಾಜ್ಯ ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿ, ಪಕ್ಷದ ವಿವಿಧ ಸ್ತರದ ಜವಾಬ್ದಾರಿಗಳನ್ನು ನಿರ್ವಹಿಸಿವ ಮೂಲಕ ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸಿ, ನಾಲ್ಕು ಬಾರಿ ಸಂಸದರಾಗಿ ಬೆಳಗಾವಿ ಕ್ಷೇತ್ರದಿಂದ ಚುನಾಯಿತರಾಗಿ ಕನ್ನಡ ಹಾಗೂ ಮರಾಠಿ ಭಾಷಿಕರ ವಿಶ್ವಾಸ ಸಂಪಾದಿಸಿದ್ದರು.

ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ದೇಶದಲ್ಲಿ ಅದರಲ್ಲೂ ನಮ್ಮ ರಾಜ್ಯಕ್ಕೆ ರೈಲ್ವೆ ಯೋಜನೆಗಳು ಅನುಷ್ಠಾನವಾಗುವಂತೆ ಕೆಲಸ ಮಾಡುವ ಮೂಲಕ ಭರವಸೆ ಮೂಡಿಸಿದ ದಕ್ಷ ಆಡಳಿತಗಾರ ಅಂಗಡಿಯವರನ್ನು ಕಳೆದುಕೊಂಡು ನಾಡು ಬಡವಾಗಿದೆ.

ನಮ್ಮ ಪಕ್ಷವು ಒಬ್ಬ ನಿಷ್ಠಾವಂತ ಕಾರ್ಯಕರ್ತನನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಕಾರ್ಯಕರ್ತ ಬಂಧುಗಳಿಗೆ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love