ಕೇಮಾರು ಶ್ರೀಗಳಿಗೆ ಜೀವಬೆದರಿಕೆ
ಉಡುಪಿ: ಶಿರೂರು ಶ್ರೀ ಅನುಮನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಮಾರು ಶ್ರೀಗೆ ಜೀವ ಬೆದರಿಕೆ ಬಂದಿದೆ.
ಕೇಮಾರು ಸಾಂದೀಪನಿ ಮಠದ ಈಶ ವಿಠಲದಾಸ ಸ್ವಾಮೀಜಿ ಅವರು ಸಾಮಾಜಿಕ ಜಾಲತಾಣದ ಮೂಲಕ ಬೆದರಿಕೆ ಎದುರಿಸುತ್ತಿದ್ದಾರೆ. ಶಿರೂರು ಶ್ರೀ ಅಸಹಜ ಸಾವಿನ ಬಗ್ಗೆ ಕೇಮಾರು ಮಾಧ್ಯಮಗಳ ಮುಂದೆ ಮಾತನಾಡಿದ್ದು ಹಾಗೂ ಎಸ್‍ಪಿಗೆ ಮನವಿ ಕೊಟ್ಟಿದ್ದಕ್ಕೆ ಬೆದರಿಕೆ ಕರೆ, ಸಂದೇಶಗಳು ಬಂದಿದೆ ಎಂದು ಕೇಮಾರು ಶ್ರೀ ಹೇಳಿದ್ದಾರೆ.
ಈ ಕುರಿತು ಅಗತ್ಯ ಬಿದ್ದರೆ ದೂರು ನೀಡುತ್ತೇನೆ. ಎಲ್ಲವನ್ನೂ ದೇವರು ನೋಡಿಕೊಳ್ಳುತ್ತಾನೆ ಅಂತ ಕೇಮಾರು ಈಶ ವಿಠಲ ಸ್ವಾಮೀಜಿ ಹೇಳಿದ್ದಾರೆ.
ಶಿರೂರು ದೇಹದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ ಅಂತ ಸುದ್ದಿಯಾದ ಬಳಿಕ ಕೇಮಾರು ಶ್ರೀಗಳು ಮಾಧ್ಯಮಗಳ ಜೊತೆ ಮಾತನಾಡಿ, ಮಠದಲ್ಲಿ ಎಲ್ಲರು ಊಟ ಮಾಡಿದ್ದಾರೆ. ಆದ್ರೆ ಸ್ವಾಮೀಜಿಯೊಬ್ಬರಿಗೆ ಮಾತ್ರ ಯಾಕೆ ಫುಡ್ ಪಾಯಿಸನ್ ಆಗ್ಬೇಕು ಅಂತ ಪ್ರಶ್ನಿಸಿದ್ದರು. ಹಾಗೇ ಆಗೋದಾದ್ರೆ ಎಲ್ಲರೂ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಬೇಕಿತ್ತು. ಹೀಗಾಗಿ ಒಂದು ವೇಳೆ ಜಿಲ್ಲಾಡಳಿತ ಹಾಗು ಪೊಲೀಸ್ ಇಲಾಖೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದ್ದರು.
ಶ್ರೀಗಳ ದೇಹದಲ್ಲಿ ವಿಷಕಾರಿ ಅಂಶ ಇದೆ ಅಂತ ಡಾಕ್ಟರ್ ಹೇಳಿದ್ದಾರೆ. ಆದ್ರೆ ಅದರ ಬಗ್ಗೆ ಸಮಗ್ರ ತನಿಖೆ ನಡೆಸಲಿ. ವೈದ್ಯರು ಬರೀ ಹೇಳಿದ್ರೆ ಸಾಲದು ಆ ಬಗ್ಗೆ ವರದಿ ಕೊಡಲಿ. ಅಲ್ಲದೇ ಪೊಲೀಸರು ಕೂಡ ಸಮಗ್ರ ತನಿಖೆ ನಡೆಸಬೇಕಿದೆ. ಹಾಗೆಯೇ ಸರ್ಕಾರ ಕೂಡಲೇ ಮಧ್ಯಪ್ರವೇಶಿಸದಿದ್ದರೆ ತೀವ್ರ ಗೊಂದಲದ ವಾತಾವರಣ ನಿರ್ಮಾಣವಾಗುತ್ತದೆ ಅಂತ ಅವರು ಸರ್ಕಾರವನ್ನು ಆಗ್ರಹಿಸಿದ್ದರು.