ಕೊಂಕಣಿ ಸಾಹಿತ್ಯ ಅಕಾಡೆಮಿ: ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ
ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ 2024ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ ಕಾರ್ಯಕ್ರಮವು ಮಾರ್ಚ್ 23 ರಂದು ಮೈಸೂರಿನ ‘ಕೊಂಕಣ್ ಭವನʼದಲ್ಲಿ ಜರುಗಿತು.
ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಶಸ್ತಿ ಪುರಸ್ಕøತರನ್ನು ಸನ್ಮಾನಿಸಿದರು. ಕೊಂಕಣಿ ಭಾμÉಯ ಸಾಹಿತ್ಯ, ಕಲೆ ಇನ್ನು ಬೆಳೆಯಲಿ. ಕೊಂಕಣಿ ಭವನ ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಕೊಡುವಲ್ಲಿ ಸರ್ಕಾರದ ಬಳಿ ಮಾತುಕತೆ ನಡೆಸುತ್ತೇನೆಂದು ಭರವಸೆ ನೀಡಿದರು. ಕೊಂಕಣಿ ಭಾμÉ ಉಳಿಸಲು ಸಹಕಾರ ಕೊಡುತ್ತೇನೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ವಹಿಸಿದ್ದರು.
ಹಲವಾರು ಕಥೆ, ಕಾದಂಬರಿ, ಕವನಗಳನ್ನು ಬರೆದು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶ್ರೀ ಪೆಟ್ರಿಕ್ ಕಾಮಿಲ್ ಮೋರಾಸ್, ವಿವಿಧ ಕೊಂಕಣಿ ಸಂಗೀತ ವಾದ್ಯಗಳಲ್ಲಿ ಪರಿಣತಿ ಪಡೆದು, ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶ್ರೀ ಜೋಯೆಲ್ ಪಿರೇರಾ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಿದ್ದಿ ಸಂಸ್ಕೃತಿಯನ್ನು ಉಳಿಸಿ ಪಸರಿಸಿದ ಶ್ರೀಮತಿ ಸೊಬೀನಾ ಮೋತೇಶ್ ಕಾಂಬ್ರೆಕರ್ ಇವರಿಗೆ ಜಾನಪದ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಕ್ಕಾಗಿ ಅಕಾಡೆಮಿ ಪರವಾಗಿ ಗೌರವ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಫೆಲ್ಸಿ ಲೋಬೊ ಇವರಿಗೆ ʼಪಾಲ್ವಾ ಪೆÇೀಂತ್ʼ ಕವಿತಾ ಪುಸ್ತಕಕ್ಕೆ ಹಾಗೂ ವಲೇರಿಯನ್ ಸಿಕ್ವೇರಾ ಇವರಿಗೆ ‘ಶೆತಾಂ ಭಾಟಾಂ ತೊಟಾಂನಿ’ ಲೇಖನ ಪುಸ್ತಕಕ್ಕೆ ಪುಸ್ತಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ಪುರಸ್ಕೃತರ ಪರವಾಗಿ ಜೋಯೆಲ್ ಪಿರೇರಾ ಹಾಗೂ ಫೆಲ್ಸಿ ಲೋಬೊರವರು ತಮ್ಮ ಅನಿಸಿಕೆಗಳನ್ನು ಹಂಚಿ, ಅಕಾಡೆಮಿಗೆ ಹಾಗೂ ಅವರ ವೈಯುಕ್ತಿಕ ಸಾಧನೆಗೆ ಪೆÇ್ರೀತ್ಸಾಹ ನೀಡಿದವರಿಗಾಗಿ ಧನ್ಯವಾದಗಳನ್ನು ಅರ್ಪಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ ಪರಿಚಯ ಪುಸ್ತಕವನ್ನು ವಿಮೋಚನೆಗೊಳಿಸಿ, ತಮ್ಮ ಮಾತೃಭಾμÉಯೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಭಾμÉಯನ್ನು ಉಳಿಸಿಕೊಂಡು ಬಂದ ಎಲ್ಲಾ ಸಾಹಿತಿ, ಕಲಾವಿದರಿಗೆ ಕೃತಜ್ಞತೆ ತಿಳಿಸಿದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ವಲೇರಿಯನ್ ಡಿಸೋಜ(ವಲ್ಲಿ ವಗ್ಗ), ಕೊಂಕಣಿ ಕ್ರಿಶ್ಚಿಯನ್ ಅಸೋಸಿಯೇಶನ್ ಅಧ್ಯಕ್ಷ ಜೋನ್ ಡಿಸೋಜ ಹಾಗೂ ಕಾರ್ಯದರ್ಶಿ ಜೋಯ್ಸ್ ಸಿಕ್ವೇರಾ ಉಪಸ್ಥಿತರಿದ್ದರು.
ಕೊಂಕಣಿ ಕ್ರಿಶ್ಚಿಯನ್ ಅಸೋಸಿಯೇಶನ್ ಅಧ್ಯಕ್ಷ ಜೋನ್ ಡಿಸೋಜ ವಂದನಾರ್ಪಣೆ ಸಲ್ಲಿಸಿದರು. ಸಪ್ನಾ ಮೇ ಕ್ರಾಸ್ತಾ ಕಾರ್ಯಕ್ರಮವನ್ನು ನಿರೂಪಿಸಿದರು.
ಅಕಾಡೆಮಿ ಸದಸ್ಯರಾದ ನವೀನ್ ಲೋಬೊ, ರೊನಾಲ್ಡ್ ಕ್ರಾಸ್ತಾ, ಸಮರ್ಥ್ ಭಟ್, ದಯಾನಂದ ಮಡ್ಕೇಕರ್, ಅಕ್ಷತಾ ನಾಯಕ್ ವೇದಿಕೆಯಲ್ಲಿದ್ದರು.
ಆಂಟನಿ ಕೀರ್ತನ್ ಜೇಮ್ಸ್ ಮತ್ತು ತಂಡದಿಂದ ಬ್ರಾಸ್ ಬ್ಯಾಂಡ್, ಎಲ್ರೋನ್ ರೊಡ್ರಿಗಸ್ ಮತ್ತು ತಂಡದಿಂದ ಕೊಂಕಣಿ ಸಂಗೀತ ರಸಮಂಜರಿ ಕಾರ್ಯಕ್ರಮವು ನಡೆಯಿತು.