ಕೊಟ್ಟಾರ ಚೌಕಿ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: ಇಬ್ಬರ ಸೆರೆ

Spread the love

ಕೊಟ್ಟಾರ ಚೌಕಿ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: ಇಬ್ಬರ ಸೆರೆ

ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳಾ ಪಿಂಪ್ ಇಬ್ಬರನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಜುಲೈ 12 ರಂದು ಮಂಗಳೂರು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಪಂಪ್ ಹೌಸ್ ಬಳಿಯಲ್ಲಿರುವ ಮನೆಯೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ ಪಡುಬಿದ್ರೆ ಸಮೀಪದ ಮುದರಂಗಡಿ ನಿವಾಸಿ ಸಜಿತ್ ಶೇಖರ್ (30) ಹಾಗೂ ಮಹಿಳಾ ಪಿಂಪ್ ಒಬ್ಬಾಕೆಯನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ 5 ಮೊಬೈಲ್ ಫೋನ್ ಗಳನ್ನು ಹಾಗೂ ನಗದು ಹಣ ರೂ. 15,240/- ನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಸಜಿತ್ ಶೇಖರ್ ನು ಈ ಮನೆಯನ್ನು ಬಾಡಿಗೆಗೆ ಪಡೆದು ಮಹಿಳಾ ಪಿಂಪ್ ಜೊತೆ ಯುವತಿಯರನ್ನು ಈ ಮನೆಯಲ್ಲಿ ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಂಡು ಹಣವನ್ನು ಗಳಿಸುತ್ತಿದ್ದನು.ವೇಶ್ಯಾವಾಟಿಕೆ ವೃತ್ತಿ ನಡೆಸುತ್ತಿದ್ದ ಇಬ್ಬರು ನೊಂದ ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾದ 2 ಮಂದಿ ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐಯವರಾದ ಶ್ಯಾಮ್ ಸುಂದರ್, ಹಾಗೂ ಸಿಬ್ಬಂದಿಗಳು ಮತ್ತು ಕಾವೂರು ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಕೆ.ಆರ್ ನಾಯಕ್ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.


Spread the love