ಕೊಡಂಕೂರು ತಾರಕಟ್ಟದಲ್ಲಿ ₹2.50 ಕೋಟಿ ವೆಚ್ಚದ ಸೇತುವೆ ಮತ್ತು ರಸ್ತೆ ಕಾಮಗಾರಿಗೆ  ಯಶ್ಪಾಲ್ ಸುವರ್ಣ ಚಾಲನೆ

Spread the love

ಕೊಡಂಕೂರು ತಾರಕಟ್ಟದಲ್ಲಿ ₹2.50 ಕೋಟಿ ವೆಚ್ಚದ ಸೇತುವೆ ಮತ್ತು ರಸ್ತೆ ಕಾಮಗಾರಿಗೆ  ಯಶ್ಪಾಲ್ ಸುವರ್ಣ ಚಾಲನೆ

ಉಡುಪಿ:  ನಗರಸಭೆಯ ಕೊಡಂಕೂರು ವಾರ್ಡಿನ ನೆರೆಪೀಡಿತ ತಾರಕಟ್ಟ ಪ್ರದೇಶದಲ್ಲಿ ಸುಮಾರು ₹2.50 ಕೋಟಿ ವೆಚ್ಚದಲ್ಲಿ ಇಂದ್ರಾಣಿ ನದಿಗೆ ನೂತನ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ ಕಳೆದ ಹಲವು ದಶಕಗಳ ಸ್ಥಳೀಯರ ಬೇಡಿಕೆಯಂತೆ ಕರ್ನಾಟಕ ನೀರಾವರಿ ನಿಗಮದ ಮೂಲಕ 2.50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಿಸಿ, ಸಂಪರ್ಕ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿದ್ದು, ಮಳೆಗಾಲದಲ್ಲಿ ನೀರು ಸರಾಗ ಹರಿದು ನೆರೆ ಸೃಷ್ಟಿಯಾಗುವ ಸಮಸ್ಯೆ ಪರಿಹಾರವಾಗಲಿದ್ದು ನೂತನ ರಸ್ತೆ ಕೊಡಂಕೂರಿನಿಂದ ಮೂಡಬೆಟ್ಟು ಭಾಗಕ್ಕೆ ನೇರ ಸಂಪರ್ಕ ಕಲ್ಪಿಸಲಿದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ  ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ  ರಜನಿ ಹೆಬ್ಬಾರ್, ನಗರಸಭಾ ಸದಸ್ಯರಾದ  ಸಂಪಾವತಿ,   ಹರೀಶ್ ಶೆಟ್ಟಿ,   ಟಿ. ಜಿ. ಹೆಗ್ಡೆ,  ಸವಿತಾ ಹರೀಶ್ ರಾಮ್, ಪಕ್ಷದ ಪ್ರಮುಖರಾದ  ಹರೀಶ್ ರಾಮ್,  ಸಂದೀಪ್ ಕೋಟ್ಯಾನ್,  ರಾಜೇಶ್,  ಜಯಕರ ಪಾಲನ್,  ಪ್ರಶಾಂತ್ ಪೂಜಾರಿ,  ಶಿವರಾಜ ಕರ್ಕೇರ, ಸ್ಥಳೀಯ ಮುಖಂಡರು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು, ಗುತ್ತಿಗೆದಾರರು ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments