ಕೊನೆಗೂ ನಾಪತ್ತೆಯಾದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಪತ್ತೆ!
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ದಿಗಂತ್ ಉಡುಪಿಯಲ್ಲಿ ಪತ್ತೆಯಾಗಿರುವುದಾಗಿ ಹೇಳಲಾಗುತ್ತಿದ್ದು ಪೊಲೀಸರು ಇನ್ನಷ್ಟೇ ಸ್ಪಷ್ಟಪಡಿಸಬೇಕಾಗಿದೆ.
ಉಡುಪಿಯ ಡಿ ಮಾರ್ಟ್ ಒಳಗೆ ಬಟ್ಟೆಗಳನ್ನು ಬ್ಯಾಗ್ ಗೆ ತುಂಬಿಸಿಕೊಳ್ಳುತ್ತಿದ್ದಾಗ ಸಿಕ್ಕಿಬಿದ್ದಿದ್ದು ದಿಗಂತ ಚಲನವಲನ ಕಂಡು ಸಂಶಯಗೊಂಡ ಸಿಬ್ಬಂದಿ ವಿಚಾರಣೆ ನಡೆಸುವಾಗ ತಾನು ದಿಗಂತ್ ಎಂದು ಹೇಳಿಕೊಂಡಿರುತ್ತಾನೆ. ಇದರ ಆಧಾರದ ಮೇಲೆ ಮಂಗಳೂರಿಗೆ ದಿಗಂತ್ ರನ್ನು ಕರೆದುಕೊಂಡು ಪೊಲೀಸರು ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿಎಆರ್ ತಂಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ. ಡ್ರೋಣ್ ಕ್ಯಾಮೆರಾಗಳನ್ನು ನಡೆಸಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ದಿಗಂತ್, ಫೆ.25ರ ಸಂಜೆಯಿಂದ ನಾಪತ್ತೆಯಾಗಿದ್ದ. ಫರಂಗಿಪೇಟೆ ಆಂಜನೇಯ ವ್ಯಾಯಾಮ ಶಾಲೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್, ದೇವಸ್ಥಾನಕ್ಕೂ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿದ್ದ. ಬಳಿಕ ಫರಂಗಿಪೇಟೆಯಲ್ಲಿ ರೈಲ್ವೆ ಹಳಿಯಲ್ಲಿ ದಿಗಂತ್ ಚಪ್ಪಲಿ ಹಾಗೂ ಮೊಬೈಲ್ ಪತ್ತೆಯಾಗಿತ್ತು. ಒಂದು ಚಪ್ಪಲಿಯಲ್ಲಿ ರಕ್ತದ ಕಲೆ ಕಂಡುಬಂದಿತ್ತು.