ಕೊರೊನಾಗೆ ಹೆದರಿ ಬಸ್ಸಿನಲ್ಲೇ ಕೆ.ಎಸ್.ಆರ್.ಪಿ ಹೆಡ್ ಕಾನ್ ಸ್ಟೇಬಲ್ ಆತ್ಮಹತ್ಯೆ
ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲೂ ಇತ್ತೀಚೆಗೆ ಪೊಲೀಸರಿಗೆ ಕೊರೊನಾ ವಕ್ಕರಿಸುತ್ತಿದೆ. ಇದೀಗ ಕೊರೊನಾಗೆ ಹೆದರಿ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಕೆ.ಎಸ್.ಆರ್.ಪಿ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 50 ವರ್ಷದ ಕೆಎಸ್ಆರ್ಪಿ ಹೆಡ್ ಕಾನ್ಸ್ಟೇಬಲ್ ಎಂದು ತಿಳಿದುಬಂದಿದೆ. ಅವರಿಗೆ ಸೋಮವಾರ ಸಂಜೆಯಷ್ಟೇ ಕೊರೊನಾ ಪಾಸಿಟಿವ್ ಬಂದಿತ್ತು.
ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಬಸ್ಸಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಕೆಎಸ್ಆರ್ಪಿ ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಕೋವಿಡ್-19 ಸಾವಿನ ಸರಣಿ ಮುಂದುವರಿದಿದ್ದು, ಸೋಮವಾರ 37 ವರ್ಷದ ಮಹಿಳೆ ಸೇರಿ ಐವರು ಕೊರೊನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವನ್ನಪ್ಪಿದವರ ಸಂಖ್ಯೆ 142ಕ್ಕೆ ಏರಿಕೆಯಾಗಿದೆ.