ಕೊರೊನಾ ವಾರಿಯರ್ಗೆ ಧಮ್ಕಿ ಆರೋಪ; ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ಧ ಎಫ್ಐಆರ್
ಮಂಡ್ಯ: ಕೊರೊನಾ ವಾರಿಯರ್ ಮಹಿಳಾ ಪೊಲೀಸ್ ಅಧಿಕಾರಿಗೆ ಧಮ್ಕಿ ಹಾಕಿ, ಪೋಸ್ಟಿಂಗ್ ಕೊಡಿಸೋದಿಲ್ಲ ಎಂದು ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣದಡಿ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ಧ ಕೆ.ಆರ್.ಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆ.ಆರ್.ಪೇಟೆ ಪಟ್ಟಣದಲ್ಲಿ ಕಳೆದ ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ, ರಸ್ತೆ ಬದಿ ಕಾರು ನಿಲ್ಲಿಸಿಕೊಂಡಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ವಿಜಿ ಕುಮಾರ್ಗೆ ಮನೆಗೆ ಹೋಗುವಂತೆ ಸೂಚನೆ ನೀಡಿದ್ದಾರೆ. ಇದಕ್ಕೆ ಕೋಪಗೊಂಡು ಪೊಲೀಸ್ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದರ್ಪ ತೋರಿದ ಜಿಲ್ಲಾಧ್ಯಕ್ಷನ ವಿರುದ್ದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.