Home Mangalorean News Kannada News ಕೊರೋನಾ ಆತಂಕದ ನಡುವೆಯೇ ಉಡುಪಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ

ಕೊರೋನಾ ಆತಂಕದ ನಡುವೆಯೇ ಉಡುಪಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ

Spread the love

ಕೊರೋನಾ ಆತಂಕದ ನಡುವೆಯೇ ಉಡುಪಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ

ಉಡುಪಿ: ಕೊರೋನಾ ಆತಂಕದ ನಡುವೆ ಉಡುಪಿ ಜಿಲ್ಲೆಯಲ್ಲಿ ಗುರುವಾರ ಎಸ್.ಎಸ್.ಎಲ್.ಸಿ ಪರೀಕ್ಷೆ 51 ಕೇಂದ್ರಗಳಲ್ಲಿ ಶಾಂತಿಯುತವಾಗಿ ಆರಂಭಗೊಂಡಿದೆ.

ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿದ್ದ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿದೆ.

ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಿದ್ಧತೆ ಪೂರ್ಣವಾಗಿದ್ದು, ವಿದ್ಯಾರ್ಥಿಗಳು ಹೆತ್ತವರೊಂದಿಗೆ ಶಾಲೆಗೆ ಬರುತ್ತಿರುವ ದೃಶ್ಯ ಕಂಡುಬಂತು.

ಪ್ರತಿ ವಿದ್ಯಾರ್ಥಿಗಳ ಥರ್ಮಲ್ ಸ್ಕ್ರೀನಿಂಗ್ ಮಾಡಲು ಬಾಕ್ಸ್ ರಚನೆ ಮಾಡಲಾಗಿದ್ದು, ಪರೀಕ್ಷಾ ಕೊಠಡಿಗೆ ತೆರಳುವ ಮುನ್ನ ಪ್ರತೀ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಿ ಪರೀಕ್ಷಾ ಕೊಠಡಿಗೆ ಬಿಡಲಾಯಿತು.

ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೊಟ್ ಒಳಕಾಡು ಸರಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


Spread the love

Exit mobile version