Home Mangalorean News Kannada News ಕೊರೋನಾ ಗೆ ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ ಮೂರು ಬಲಿ; ಮೃತರ ಸಂಖ್ಯೆ 8 ಕ್ಕೆ...

ಕೊರೋನಾ ಗೆ ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ ಮೂರು ಬಲಿ; ಮೃತರ ಸಂಖ್ಯೆ 8 ಕ್ಕೆ ಏರಿಕೆ

Spread the love

ಕೊರೋನಾ ಗೆ ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ ಮೂರು ಬಲಿ; ಮೃತರ ಸಂಖ್ಯೆ 8 ಕ್ಕೆ ಏರಿಕೆ

ಉಡುಪಿ: ಕರೋನಾ ಮಹಾಮಾರಿಗೆ ಉಡುಪಿ ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ ಮೂರು ಬಲಿಯಾಗಿದ್ದು ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ.

ಬೆಳಿಗ್ಗೆ ಉಡುಪಿಯ ಡಾ. ಟಿ ಎಮ್ ಎ ಪೈ ಕೋವಿಡ್ ಆಸ್ಪತ್ರೆಯಲ್ಲಿ 49 ರ ಹರೆಯದ ಉಡುಪಿ ನಿವಾಸಿ ಹೈ ಶುಗರ್ ನಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ಅದೇ ರೀತಿ ಕುಂದಾಪುರದ ಆಸ್ಪತ್ರೆಯಲ್ಲಿ 58 ವರ್ಷ ಪ್ರಾಯದ ಮರವಂತೆ ನಿವಾಸಿ ತೀವ್ರವಾದ ಅಸ್ತಮ ಕಾಯಿಲೆಯಿಂದ ಬಳಲುತ್ತಿದ್ದು ಅವರನ್ನು ಕೋವೀಡ್ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ದೃಢಪಟ್ಟಿತ್ತು. ಆದರೆ ಅವರು ಚಿಕಿತ್ಸೆ ಆರಂಭಿಸುವ ಮೊದಲೇ ಮೃತಪಟ್ಟಿದ್ದರು.

ಇಲ್ಲದೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಅಂಕೋಲ ಮೂಲದ ವ್ಯಕ್ತಿಯೊಬ್ಬರು ದಾಖಲಾಗಿದ್ದು ಅವರಲ್ಲಿ ಕೂಡ ಕೋವಿಡ್ ಸೋಂಕು ಪತ್ತೆಯಾಗಿದ್ದು ಅವರೂ ಕೂಡ ಮಂಗಳವಾರ ಮೃತಪಟ್ಟಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಬುಧವಾರ ಉಡುಪಿ ಬೀಡಿನಗುಡ್ಡೆಯಲ್ಲಿ ಕೋವಿಡ್ ಮಾರ್ಗಸೂಚಿಯಂತೆ ನಡೆಸಲಾಗಿದೆ ಎಂದೂ ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.


Spread the love

Exit mobile version