ಕೊರೋನಾ : ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಅರಿವು ಮೂಡಿಸಿ- ಜಿಲ್ಲಾಧಿಕಾರಿ ಜಿ.ಜಗದೀಶ್

Spread the love

ಕೊರೋನಾ : ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಅರಿವು ಮೂಡಿಸಿ- ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಕೊರೋನಾ ವೈರಸ್ ಮತ್ತು ಅದರ ನಿಯಂತ್ರಣ ಕ್ರಮಗಳ ಬಗ್ಗೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಉಡುಪಿ ರೆಡ್ ಕ್ರಾಸ್ ಸಂಸ್ಥೆಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರೆಡ್‍ಕ್ರಾಸ್ ಉಡುಪಿ ಜಿಲ್ಲಾ ಘಟಕ ವತಿಯಿಂದ ಕೊರೋನಾ ವೈರಸ್ ಜಾಗೃತಿ ಅಭಿಯಾನದ ಅಂಗವಾಗಿ ಸಿದ್ದಪಡಿಸಿರುವ, ಕರಪತ್ರ, ಮಾಸ್ಕ್ ಮತ್ತು ಸ್ಯಾನಿಟೈಸರ್ ಬಿಡುಗಡೆಗೊಳಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 158 ಗ್ರಾಮ ಪಂಚಾಯತ್‍ಗಳಲ್ಲಿ ಕೊರೋನಾ ನಿಯಂತ್ರಣ ಕ್ರಮಗಳ ಕುರಿತ ಕರಪತ್ರಗಳನ್ನು ಮನೆ ಮನೆಗೆ ತಲುಪುವಂತೆ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಮಾಸ್ಕ್ ಮತ್ತು ಸ್ಯಾನಿಟೈಸರ್‍ಗಳನ್ನು ಎಲ್ಲಾ ಆರೋಗ್ಯ ಕೇಂದ್ರಗಳಿಗೆ ವಿತರಿಸುವಂತೆ ಸೂಚಿಸಿದರು.

ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ದೇಶದ 29 ರಾಜ್ಯ ಮತ್ತು ಎಲ್ಲಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಾವಿರಾರು ಯುವಕರಿಗೆ , ಕೊರೋನಾ ಜನಜಾಗೃತಿ ಮೂಡಿಸುವ ಕುರಿತು ತರಬೇತಿ ನೀಡಿದ್ದು, ಈ ಪಿಡುಗಳನ್ನು ಬೇರು ಸಮೇತ ತೊಲಗಿಸಲು ಎಲ್ಲಾ ನಾಗರೀಕರು ಸಹಕರಿಸುವಂತೆ ಹಾಗೂ ಮಾಚ್ ್ 22 ರಂದು ನಡೆಯುವ ಜನತಾ ಕಫ್ರ್ಯೂನಲ್ಲಿ ಪ್ರತಿಯೊಬ್ಬರೂ ಭಾಗವಹಿಸುವಂತೆ ತಿಳಿಸಿದರು.

ಉಪ ಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ, ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಮತ್ತು ಕಾರ್ಯಕಾರಿ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.


Spread the love