ಕೊರೋನಾ: ಭ್ರಷ್ಟಾಚಾರ ನಡೆದ ಬಗ್ಗೆ ದಾಖಲೆ ಇದ್ದರೆ ನೀಡಿ; ಸುಳ್ಳು ಆರೋಪ ಮಾಡಿದ್ರೆ ಸುಮ್ಮನಿರಲ್ಲ – ಡಿಸಿ ಜಗದೀಶ್

Spread the love

ಕೊರೋನಾ: ಭ್ರಷ್ಟಾಚಾರ ನಡೆದ ಬಗ್ಗೆ ದಾಖಲೆ ಇದ್ದರೆ ನೀಡಿ; ಸುಳ್ಳು ಆರೋಪ ಮಾಡಿದ್ರೆ ಸುಮ್ಮನಿರಲ್ಲ – ಡಿಸಿ ಜಗದೀಶ್

ಉಡುಪಿ: ಕೊರೊನಾ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಬಗ್ಗೆ ದಾಖಲೆ ಇದ್ದರೆ ನೀಡಿ, ಅದು ಬಿಟ್ಟು ಸೋಶಿಯಲ್ ಮೀಡಿಯಾದಲ್ಲಿ ಅನವಶ್ಯಕ ಆರೋಪ ಮಾಡಿದ್ರೆ ಸುಮ್ಮನಿರಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಣಗಳಲ್ಲಿ ಬರುತ್ತಿರುವ ಆರೋಪಗಳಿಗೆ ಅವರು ಉತ್ತರಿಸಿದ್ದಾರೆ. ಸದ್ಯ ಹೋಂ ಕ್ವಾರಂಟೈನ್ ನಲ್ಲಿ ರುವ ಅವರು, ಫೇಸ್ ಬುಕ್ ಮೂಲಕವೇ ಉತ್ತರ ನೀಡಿದ್ದಾರೆ.

ಇತ್ತೀಚೆಗೆ ಅಸುನೀಗಿದ 26 ವರ್ಷದ ಮಹಿಳೆ ಸಾವಿನಲ್ಲಿ ವೈದ್ಯರ ನಿರ್ಲಕ್ಷ್ಯ ಆರೋಪ ಕೇಳಿಬಂದಿದೆ.ಈ ವಿಚಾರದ ತನಿಖೆಗಾಗಿ ತಂಡ ರಚನೆ ಮಾಡಿದ್ದೇವೆ.ತಪ್ಪು ಕಂಡುಬಂದರೆ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದಿದ್ದಾರೆ. ಇನ್ನು ಶವ ಅದಲುಬದಲಾದ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಡಿಸಿ,ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆಯಿಂದ ಇರಲು ಸೂಚಿಸಿದ್ದೇನೆ ಅಂತಲೂ ಹೇಳಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಟೆಸ್ಟ್ ಪ್ರಮಾಣವನ್ನು ಹೆಚ್ಚು ಮಾಡಿದ್ದೇವೆ. ರೋಗ ಹಬ್ಬದಿರಲಿ ಎಂಬ ಉದ್ದೇಶದಿಂದ ಈ ಕ್ರಮ ಕೈಗೊಂಡಿದ್ದೇವೆ.ರೋಗ ಲಕ್ಷಣ ಇಲ್ಲದವರು ಮನೆಯಲ್ಲೇ ಕ್ವಾರಂಟೈನ್ ಆಗಿರಿ.ಅದು ಬಿಟ್ಟು ಸುತ್ತಾಡಿದರೆ ವಿನಾಕಾರಣ ರೋಗ ಹಬ್ಬುತ್ತದೆ.

ಖಾಸಗಿ ಆಸ್ಪತ್ರೆಯವರು ಹಣದ ದಂಧೆ ಮಾಡ್ತಾರೆ ಎಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಮಾಡ್ತಾರೆ.ದುರುದ್ದೇಶದಿಂದ ಆರೋಪ ಮಾಡದೆ ,ದಾಖಲೆ ನೀಡಿದರೆ ಕ್ರಮ ಕೈಗೊಳ್ಳುತ್ತೇವೆ.ಸುಮ್ನೇ ಆರೋಪ ಮಾಡಿದ್ರೆ ಸಹಿಸುವುದಿಲ್ಲ ಎಚ್ಚರಿಕೆ ನೀಡಿದ್ದಾರೆ.


Spread the love