ಕೊರೋನಾ ಸೋಂಕಿಗೆ ಮಂಗಳೂರಿನಲ್ಲಿ 58 ವರ್ಷದ ಮತ್ತೊಂದು ಮಹಿಳೆ ಬಲಿ
ಮಂಗಳೂರು: ಕೊರೋನಾ ಸೋಂಕಿಗೆ ಮಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದ್ದು ಬೊಳೂರು ನಿವಾಸಿ 58 ವರ್ಷದ ಮಹಿಳೆ ಸಾವನಪ್ಪಿದ್ದಾರೆ.
ಮೆದುಳು ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಫಸ್ಟ್ ನ್ಯೂರೋ ಆಸ್ಪತ್ರೆ ಯ ಚಿಕಿತ್ಸೆ ಪಡೆಯುತ್ತಿದ್ದಾಗ ಸ್ವೀಪರ್ ನ ಸಂಪರ್ಕದಿಂದ ಸೋಂಕು ಹರಡಿತ್ತು.
ಎಪ್ರಿಲ್ 30 ರಂದು ವೃದ್ಧೆಗೆ ಕೊರೊನಾ ಸೋಂಕು ಧೃಡಪಟ್ಟಿತ್ತು. ಸದ್ಯ ಮಂಗಳೂರಿನ ಕೋವಿಡ್ ಆಸ್ಪತ್ರೆಯ ಐಸಿಯು ನಲ್ಲಿದ್ದ ವೃದ್ದೆ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ.