ಕೊಲೆ ಪ್ರಕರಣ ಆರೋಪಿ ಜಿಪಂ ಸದಸ್ಯ ರಾಜೀನಾಮೆಗೆ ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ ಆಗ್ರಹ

Spread the love

ಕೊಲೆ ಪ್ರಕರಣ ಆರೋಪಿ ಜಿಪಂ ಸದಸ್ಯ ರಾಜೀನಾಮೆಗೆ ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ ಆಗ್ರಹ

ಉಡುಪಿ: ಅಮಾಯಕ ಯುವಕರ ಜೋಡಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಬಂಧನವಾಗಿರುವ ಕೋಟ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯ ರಾಘವೇಂದ್ರ ಕಾಂಚನ್ ಅವರು ಕೂಡಲೇ ತಮ್ಮ ಜಿಲ್ಲಾ ಪಂಚಾಯತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವಂತೆ ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಮೆಲ್ವಿನ್ ಡಿಸೋಜಾ ಆಗ್ರಹಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು ಬಂಧನವಾಗಿ ಎರಡು ದಿನ ಕಳೆದರೂ ಕೂಡ ಬಿಜೆಪಿಯ ನಾಯಕರು ಜಿಪಂ ಸದಸ್ಯನ್ನನ್ನು ಪಕ್ಷದಿಂದ ಉಚ್ಚಾಟಿಸದೆ ಇರುವುದು ಸಂಶಯಕ್ಕೆ ಎಡೆಮಾಡಿದೆ. ಜಿಲ್ಲಾ ಪಂಚಾಯತ್ ಸದಸ್ಯರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಉಡುಪಿ ಜಿಲ್ಲೆಗೆ ನಾಚೀಕೆಗೇಡಿನ ಸಂಗತಿಯಾಗಿದ್ದು, ಸುಶಿಕ್ಷಿತ ಜಿಲ್ಲೆಗೆ ಒಂದು ಕಪ್ಪು ಚುಕ್ಕೆ. ಆದ್ದರಿಂದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಜಿಲ್ಲಾ ಪಂಚಾಯತ್ ಸದಸ್ಯನ ರಾಜೀನಾಮೆಯನ್ನು ಬಿಜೆಪಿ ನಾಯಕರು ಕೂಡಲೇ ಪಡೆದು ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು.

ಘಟನೆಯ ಕುರಿತು ಸಂಸದೆ ಶೋಭಾ ಕರಂದ್ಲಾಜೆಯವರು ಯಾವುದೇ ಹೇಳಿಕೆಯನ್ನು ನೀಡದೆ ಮೌನವಾಗಿರುವುದು ಅವರ ದ್ವಂದ್ವ ನೀತಿಯನ್ನು ಎತ್ತಿತೋರಿಸುತ್ತದೆ. ಸದಾ ಹಿಂದುಗಳ ಕೊಲೆಯನ್ನು ಕಾಂಗ್ರೆಸ್ ನವರ ಕೈವಾಡ ಎಂದು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ನಾಯಕರು ಈ ಪ್ರಕರಣದಲ್ಲಿ ಬಿಜೆಪಿ ನಾಯಕನೇ ಯುವಕರ ಕೊಲೆಯಲ್ಲಿ ಭಾಗಿಯಾಗಿರುವುದರಿಂದ ಕೂಡಲೇ ಬಿಜೆಪಿ ಪಕ್ಷ ಜನರ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.


Spread the love