ಕೋಟ ಶ್ರೀನಿವಾಸ್ ಪೂಜಾರಿ ಅವರಿಂದ ತೆರವಾದ ವಿಧಾನ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ
ಮಂಗಳೂರು: ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಂದ ತೆರವಾದ ವಿಧಾನ ಪರಿಷತ್ನ ಉಪ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗವು ದಿನಾಂಕ ನಿಗದಿಪಡಿಸಿ ಆದೇಶಿಸಿದೆ.
ಅ. 21ರಂದು ಉಪ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಅ. 3 ಕೊನೆಯ ದಿನವಾಗಿದೆ. ಅ. 21ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅ.24ರಂದು ಮತ ಎಣಿಕೆ ನಡೆಯಲಿದೆ.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ್ ಪೂಜಾರಿಯವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರಿಂದ ತೆರವಾಗಿರುವ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.