ಕೋಟ ಹೆಚ್.ಶ್ರೀಧರ ಹಂದೆಯವರಿಗೆ ವನಜ ರಂಗಮನೆ ಪ್ರಶಸ್ತಿ-2018
ಸುಳ್ಯ : ಸುಳ್ಯದ ರಂಗಮನೆ ಸಾಂಸ್ಕøತಿಕ ಕಲಾ ಕೇಂದ್ರವು ರಂಗಮನೆ ಸ್ಥಾಪಕಿ, ಕಲಾ ಪೋಷಕಿ ದಿ|ವನಜಾಕ್ಷಿ ಜಯರಾಮ ಇವರ ಸ್ಮರಣಾರ್ಥ ನೀಡುವ 2018ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಯನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕøತ ಗುರು ಹೆಚ್.ಶ್ರೀಧರ ಹಂದೆ ಕೋಟ ಇವರಿಗೆ ನೀಡಲಾಗುವುದೆಂದು ರಂಗನಿರ್ದೇಶಕ ಜೀವನ್‍ರಾಂ ಸುಳ್ಯ ತಿಳಿಸಿದ್ದಾರೆ.
ಮಕ್ಕಳ ಯಕ್ಷಗಾನ ಮೇಳವೆಂಬ ಪರಿಕಲ್ಪನೆಯನ್ನು ಮೊಟ್ಟ ಮೊದಲ ಬಾರಿ ಸಾಕಾರಗೊಳಿಸಿದ ಕೀರ್ತಿ ಶ್ರೀಧರ ಹಂದೆಯವರಿಗೆ ಸಲ್ಲುತ್ತದೆ. 40 ವರ್ಷ ಹಿಂದಿ ಉಪನ್ಯಾಸಕರಾಗಿ, ಮುಖ್ಯೋಪಧ್ಯಾಯರಾಗಿ ಸೇವೆ ಸಲ್ಲಿಸಿದ ಇವರು 1991ರಲ್ಲಿ ರಾಷ್ಟ್ರಪತಿ ಶಂಕರ್ ದಯಾಳ್ ಶರ್ಮರವರಿಂದ ಅತ್ಯುತ್ತಮ ಶಿಕ್ಷಕ ರಾಷ್ಟ್ರಪತಿಯನ್ನು ಪಡೆದಿರುತ್ತಾರೆ.
ಸಾಲಿಗ್ರಾಮ ಮಕ್ಕಳ ಮೇಳವನ್ನು ಸ್ಥಾಪಿಸಿ , ಮಕ್ಕಳಿಗೆ ಯಕ್ಷಕಲೆಯನ್ನು ಶಾಸ್ತ್ರೀಯವಾಗಿ ತರಬೇತಿ ನೀಡಿದವರು. ಭಾರತ ಮಾತ್ರವಲ್ಲ ಅಮೇರಿಕಾ, ಬೆಹರೈನ್, ಲಂಡನ್, ಮೆಂಚೆಸ್ಟರ್ ಮುಂತಾದೆಡೆ ಪ್ರದರ್ಶನ ನೀಡುವ ಮೂಲಕ ಯಕ್ಷಗಾನವನ್ನು ವಿಶ್ವವ್ಯಾಪಿಗೊಳಿಸಲು ಶ್ರಮಿಸಿದವರು. ಕಳೆದ 43 ವರ್ಷಗಳಲ್ಲಿ 2000ಕ್ಕೂ ಮಿಕ್ಕಿ ಮಕ್ಕಳ ಯಕ್ಷ ಪ್ರದರ್ಶನ ನೀಡಿದವರು. ಭಾಗವತ, ಗಮಕಿ, ಕವಿ, ನಟ-ನಿರ್ದೆಶಕ, ನಾಟಕಕಾರ, ಸಂಘಟಕನಾಗಿಯೂ ಗುರುತಿಸಿಕೊಂಡಿರುವ ಶ್ರೀ ಹಂದೆಯವರಿಗೆ ಆಗಸ್ಟ್ 12ರಂದು ಸುಳ್ಯ ರಂಗಮನೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು.
ಪ್ರಶಸ್ತಿಯು ಶಾಶ್ವತ ಫಲಕ, ಕಲಾತ್ಮಕ ಸ್ಮರಣಿಕೆ, ಶಾಲು, ಫಲಪುಷ್ಪಗಳೊಂದಿಗೆ ರೂ.ಹತ್ತು ಸಾವಿರ ನಗದು ಹೊದಿರುತ್ತದೆ.