ಕೋರೊನಾ ದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ
ಮಂಗಳೂರು: ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರದ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ, ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಜನಾರ್ದನ ಪೂಜಾರಿ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ನಾನು ಹಾಗೂ ನನ್ನ ಕುಟುಂಬದ ಮೂವರು ಸದಸ್ಯರು ಜುಲೈ 4ರಂದು ನಗರದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೈವ-ದೇವರ ಅನುಗ್ರಹ, ನಿಮ್ಮೆಲ್ಲರ ಹಾರೈಕೆಯಿಂದ ನಾವೆಲ್ಲರೂ ಗುಣಮುಖರಾಗಿದ್ದು, ಇಂದು (ಜು.20) ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದೆ. ನಮ್ಮ ಕ್ಷೇಮಕ್ಕಾಗಿ ಪ್ರಾರ್ಥಿಸಿದ ಎಲ್ಲ ಬಂಧುಗಳಿಗೆ, ಹಿತೈಷಿಗಳು ಹಾಗೂ ನಿಮಗೆ ಉತ್ತಮ ಚಿಕಿತ್ಸೆ ನೀಡಿದ ವೈದ್ಯರು, ದಾದಿಯರು, ಸಿಬ್ಬಂದಿ ವರ್ಗ ಮತ್ತು ಸಂಸ್ಥೆಗೆ ಧನ್ಯವಾದಗಳು ಹಾಗೂ ನಿಮ್ಮ ಹಾರೈಕೆ ಸದಾ ಹೀಗೆ ಇರಲಿ.
ಕೊರೊನಾ ರೋಗಕ್ಕೆ ಯಾರೂ ಭಯಪಡಬೇಕಿಲ್ಲ, ಪ್ರತಿಯೊಬ್ಬರೂ ಆತ್ಮಸ್ಥೆರ್ಯವನ್ನು ಬೆಳೆಸಿಕೊಳ್ಳಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಲು ಉತ್ತಮ ಪೌಷ್ಟಿಕ ಆಹಾರ, ಕಷಾಯ ಸೇವನೆ ಮಾಡಿ. ಪ್ರತಿಯೊಬ್ಬರೂ ಜಾಗೃತೆ ವಹಿಸಿ. ಸಾರ್ವಜನಿಕ ಸ್ಥಳದಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.